ಸಿಆರ್‍ಜûಡ್ ವಿನಾಯಿತಿ; ಪ್ರವಾಸೋದ್ಯಮಕ್ಕೆ ಮತ್ತಷ್ಟು ಅವಕಾಶ: ಡಿಸಿ

Source: S O News Service | By I.G. Bhatkali | Published on 26th May 2019, 2:07 AM | Coastal News | State News |

ಕಾರವಾರ: ಕರಾವಳಿ ನಿಯಂತ್ರಣ ವಲಯದ (ಸಿಆರ್‍ಜûಡ್) ಹೊಸ ನಿಯಮಾವಳಿಗಳಲ್ಲಿ ಕರ್ನಾಟಕಕ್ಕೂ ಗೋವಾ ಮಾದರಿಯಲ್ಲಿ ಸ್ವಲ್ಪ ಮಟ್ಟಿನ ವಿನಾಯಿತಿಗಳು ಸಿಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಕಡಲತೀರಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಆಯಾಮ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಕೆ. ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಪ್ರವಾಸಿ ಸ್ಥಳಗಳ ಅಭಿವೃದ್ಧಿ ಹಾಗೂ  ಸಂರಕ್ಷಣಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಕರಾವಳಿ ಕಡಲತೀರದಲ್ಲಿ ಬಹುತೇಕ ಪ್ರವಾಸೋದ್ಯಮಕ್ಕೆ ಅಡ್ಡಿಯಾಗಿದ್ದ ಸಿಆರ್‍ಜóಡ್ ತನ್ನ ಹೊಸ ನಿಯಮಾವಳಿಗಳಲ್ಲಿ ಸ್ವಲ್ಪ ಮಟ್ಟಿನ ಸಡಿಲಗೊಳಿಸುತ್ತಿರುವುದರಿಂದ ಗೋವಾ ಮಾದರಿಯಲ್ಲಿ ಕಾಟೇಜ್‍ಗಳನ್ನು ನಿರ್ಮಿಸಲು ಹಾಗೂ ಇನ್ನಿತರ ಪ್ರವಾಸೋದ್ಯಮ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈಗಾಗಲೇ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದೆ. ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕಿದೆ ಹಾಗೂ ಜಿಲ್ಲೆಯ ವಿವಿಧ ಉಪ ವಿಭಾಗಗಳಿಂದ ಸಹಾಯಕ ಕಮಿಷನರ್‍ಗಳು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಹೊಸ ಪ್ರಸ್ತಾವಗಳನ್ನು ನೀಡುವಂತೆ ಅವರು ಸೂಚಿಸಿದರು.

ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಕೈಗೊಂಡಿರುವ ವಿವಿಧ ಮಹತ್ವದ ಯೋಜನೆಗಳಾದ ಸ್ಕೂಬಾ ಡೈವಿಂಗ್, ರಾಕ್‍ಗಾರ್ಡನ್, ಕಾಳಿ ರಿವರ್ ಗಾರ್ಡನ್, ಕಾರವಾರ ಮತ್ತು ಮುರುಡೇಶ್ವರದಲ್ಲಿ ಜಲಕ್ರೀಡೆಗಳ ಸಂಬಂಧಿಸಿದಂತೆ ಟೆಂಡರ್ ಪಡೆದಿರುವ ಸಂಸ್ಥೆಗಳೊಂದಿಗೆ ಚರ್ಚಿಸಿದ ಅವರು, ಮುರುಡೇಶ್ವರದ ನೇತ್ರಾಣಿಯಲ್ಲಿ ನಡೆಸುತ್ತಿರುವ ಸ್ಕೂಬಾ ಡೈವಿಂಗ್ ಚಟುವಟಿಕೆಯನ್ನು ಸಮೀಪದ ಮತ್ತೊಂದು ಭಾಗದಲ್ಲೂ ನಡೆಸುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಸಂಬಂಧಿಸಿದ ಸಂಸ್ಥೆಗಳಿಗೆ ಸೂಚಿಸಿದರು. ಅಲ್ಲದೆ ಕಾರವಾರದ ಲೈಟ್‍ಹೌಸ್‍ನಲ್ಲಿ ಸ್ಕೂಬಾ ಡೈವಿಂಗ್ ಅನುಮತಿ ಪಡೆದ ಸಂಸ್ಥೆ ಇಲ್ಲಿಯೂ ನಿರಂತರ ಚಟುವಟಿಕೆ ನಡೆಸಬೇಕು ಎಂದು ಸೂಚಿಸಿದರು.

ನೇತ್ರಾಣಿ ಗುಡ್ಡದಲ್ಲಿ ಮುನ್ಸೂಚನೆ ಇಲ್ಲದೆ ನೇವಿಯಿಂದ ಬಾಂಬ್ ಚಟುವಟಿಕೆಗಳು ನಡೆಯುವುದರಿಂದ ಸ್ಕೂಬಾ ಪ್ರವಾಸಿಗರಿಗೆ ಆತಂಕ ಸ್ಥಿತಿ ಇದೆ ಎಂಬ ವಿಷಯದ ಬಗ್ಗೆ ನೇವಿಯೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದರು.

ಅಘನಾಶಿನಿ ನದಿಯಲ್ಲಿ ಹೌಸ್‍ಬೋಟ್ ಪ್ರವಾಸೋದ್ಯಮಕ್ಕೆ ಉತ್ತಮ ಕಾರ್ಯಯೋಜನೆ ರೂಪಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಈ ಚಟುವಟಿಕೆಗೆ ಆಸಕ್ತಿ ತೋರುವ ಸಂಸ್ಥೆಗಳಿಂದ ಟೆಂಡರ್ ಆಹ್ವಾನಿಸುವಂತೆ ಸೂಚಿಸಿದರು.

ಪ್ಯಾರಾ ಮೋಟಾರ್ ಗ್ಲೈಡಿಂಗ್ ಮಾದರಿಯಲ್ಲಿಯೇ ಮೈಕ್ರೋಲೈಟ್ಸ್ ಹಾಗೂ ಹ್ಯಾಂಡ್‍ಗ್ಲೈಡಿಂಗ್‍ಗೆ ವಿದೇಶ ಪ್ರವಾಸಿಗರು ಹಾಗೂ ಸಾಹಸಿಗರು ಹೆಚ್ಚಿನ ಆಸಕ್ತಿ ತೋರುತ್ತಿದ್ದು ಕಾರವಾರದಲ್ಲಿ ಈ ಚಟುವಟಿಕೆಗೆ ಉತ್ತಮ ಅವಕಾಶವಿದೆ. ಈ ಕುರಿತು ಪ್ರಸ್ತುತ ಕಾರವಾರದಲ್ಲಿ ಪ್ಯಾರಾ ಮೋಟಾರ್ ಗ್ಲೈಡಿಂಗ್ ಮಾಡುತ್ತಿರುವ ಡಾ.ವೈದ್ಯ ಅವರಿಂದಲೇ ಪ್ರಸ್ತಾವವನ್ನು ಪಡೆಯುವಂತೆ ತಿಳಿಸಿದರು.

ಮುರುಡೇಶ್ವರದಲ್ಲಿ ಪಾರ್ಕಿಂಗ್ ಸಮಸ್ಯೆ ಹಾಗೂ ಹೆದ್ದಾರಿಯಿಂದ ದೇವಸ್ಥಾನಕ್ಕೆ ಹೋಗುವ ರಸ್ತೆ ಅಗಲೀಕರಣಕ್ಕೆ ಸೂಕ್ತ ಕ್ರಮ ವಹಿಸುವಂತೆ ಭಟ್ಕಳ ಸಹಾಯಕ ಕಮಿಷನರ್ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಅಪರ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್, ಸಹಾಯಕ ಕಮಿಷನರ್‍ಗಳಾದ ಸಾಜಿದ್ ಮುಲ್ಲಾ, ಪ್ರೀತಿ ಗೆಹ್ಲೂಟ್, ಸಿಆರ್‍ಜಡ್ ಅಧಿಕಾರಿ ಪ್ರಸನ್ನ ಪಟಗಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷ ಗೋಪಾಲ್ ಬ್ಯಾಕೋಡ್, ನಗರಸಭೆ ಆಯುಕ್ತ ಎಸ್.ಯೋಗೇಶ್ವರ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪುರುಷೋತ್ತಮ, ಕನ್ನಡ ಮತ್ತು ಸಂಸ್ಕøತಿ ಹಾಗೂ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ, ಮತ್ತಿತರರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...