ವಿಜಯೇಂದ್ರ ಪದಗ್ರಹಣಕ್ಕೆ ಹೋಗುವುದಿಲ್ಲ: ಸಿ.ಟಿ.ರವಿ

Source: VB | By I.G. Bhatkali | Published on 14th November 2023, 1:47 PM | State News | Don't Miss |

ಚಿಕ್ಕಮಗಳೂರು: ಮಧ್ಯ ಪ್ರದೇಶ ಚುನಾವಣೆಯ ಪ್ರಚಾರ ದಲ್ಲಿ ಭಾಗ ವಹಿಸಬೇಕಾಗಿರು ವುದರಿಂದ ನ.15ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನ.15ರಂದು ಅಧಿಕಾರ ಸ್ವೀಕಾರ ಮಾಡು ತ್ತಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅವರು ನನಗೆ 2 ಬಾರಿ ಕರೆ ಮಾಡಿ ಮಾತ ನಾಡಿದ್ದಾರೆ. ಕಾರ್ಯಕ್ರಮಕ್ಕೆ ಆಹ್ವಾನವನ್ನೂ ನೀಡಿದ್ದಾರೆ. ಆದರೆ, ನ.15ಕ್ಕೆ ನಾನು ರಾಜ್ಯದಲ್ಲಿ ಇರುವುದಿಲ್ಲ. ಮಧ್ಯಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ನಾನು ಅಲ್ಲಿ ಪ್ರಚಾರಕ್ಕೆ ಹೋಗಬೇಕಿದೆ. ರಾತ್ರಿವರೆಗೂ ಪ್ರಚಾರ ಇರುವುದರಿಂದ ನನಗೆ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಎಂದು ವಿಜಯೇಂದ್ರ ಅವರಿಗೆ ಹೇಳಿದ್ದೇನೆ. ಆದ್ದರಿಂದ ನಾನು ಪದಗ್ರಹಣ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದರು.

ರಾಜ್ಯಾಧ್ಯಕ್ಷರು ಎನ್ನುವುದು ಒಂದು ಸ್ಥಾನ. ಅದಕ್ಕೆ ಕೊಡಬೇಕಾದ ಗೌರವವನ್ನು ಕೊಟ್ಟೇ ಕೊಡುತ್ತೇವೆ. ನ್ಯಾಯಪೀಠ ಬದಲಾ ಗಲ್ಲ, ನ್ಯಾಯಾಧೀಶರು ಬದಲಾಗುತ್ತಾರೆ. ನ್ಯಾಯಪೀಠಕ್ಕೆ ಎಲ್ಲರೂ ಗೌರವ ಕೊಡಬೇಕು. ನಾವೂ ಗೌರವ ಕೊಡುತ್ತೇವೆ. ನಾನು 20 ವರ್ಷ ಶಾಸಕನಾಗಿದ್ದೆ. 35 ವರ್ಷ ಕಾರ್ಯಕರ್ತನಾಗಿದ್ದೆ. ಈ ಅವಧಿಯಲ್ಲಿ ಒಮ್ಮೆಯೂ ಪಕ್ಷದ ಲಕ್ಷ್ಮಣರೇಖೆಯನ್ನು ಎಂದೂ ದಾಟಿಲ್ಲ. ಜಗಳ ವಾಡಿದ್ದರೂ ಪಕ್ಷದೊಳಗೆ ಜಗಳ ಆಡಿದ್ದೇವೆ. ಈ ಜಗಳ ನಮ್ಮ ಮನೆಯೊಳಗಿನ ಜಗಳ, ಬೇರೆಯವರ ಮನೆಯಲ್ಲಿ ಕೂತು, ನಮ್ಮ ಮನೆಯ ಸಮಸ್ಯೆ ಬಗೆಹರಿಸಿ ಎಂದು ಯಾವತ್ತೂ ಕೇಳಿಲ್ಲ. ನಮ್ಮ ಮನೆಯ ಸಮಸ್ಯೆಯನ್ನು ಬಗೆಹರಿಸಿ ಎಂದು ಮನೆಯೊಳಗಿದ್ದುಕೊಂಡೇ ಕೇಳುತ್ತೇವೆ. ನಮ್ಮ ನಡುವೆ ಭಿನ್ನಾಭಿಪ್ರಾಯ ಏನೇ ಇದ್ದರೂ ಕೇಂದ್ರದಲ್ಲಿ ಮೋದಿ ಸರಕಾರ ಮತ್ತೆ ಬರಬೇಕು ಎನ್ನುವುದೇ ನಮ್ಮ ಗುರಿ ಎಂದರು.

ಬೇರೆ ಪಕ್ಷ ಸೇರುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರವಿ, ರಾಜಕೀಯ ಬೇಡ ಎಂದು ಅನಿಸಿದರೆ ಬಿಜೆಪಿ ಬಿಟ್ಟು ಇರುತ್ತೇನೆಯೇ ಹೊರತು ಬೇರೆ ಪಕ್ಷ ಸೇರಿ ರಾಜಕೀಯ ಮಾಡುವುದಿಲ್ಲ. ರಾಜಕೀಯ ಬಿಟ್ಟರೂ ನಾನು ಬೇರೆ ಪಕ್ಷಕ್ಕೆ ಮತ ಕೇಳಲೂ ಆಗುವುದಿಲ್ಲ. ಬಿಜೆಪಿಗೆ ಮತ ಕೇಳಬೇಕು. ಯಾವ ಜವಾಬ್ದಾರಿ ಇಲ್ಲದಿದ್ದರೂ ಶಕ್ತಿ ಮೀರಿ ಮೋದಿಗಾಗಿ ಬಿಜೆಪಿಗೆ ಮತಕೇಳುತ್ತೇನೆ ನನಗೆ ಅಧಿಕಾರ ಕೊಟ್ಟರೆ ಮಾತ್ರ ಬಿಜೆಪಿ, ಕೊಡದಿದ್ದರೆ ಬಿಜೆಪಿ ಬೇಡ ಎಂದು ನಾನು ಹೇಳಲ್ಲ. ಬಿಜೆಪಿ ಸೇರಿದಾಗಿನಿಂದ ಓಟು ನೀಡಿರುವುದು ಬಿಜೆಪಿಗೆ, ಓಟು ಕೇಳಿರುವುದೂ ಬಿಜೆಪಿಗೆಯೇ ಎಂದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...