ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ಅಂಗೀಕರಿಸದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

Source: S.O. News Service | By I.G. Bhatkali | Published on 25th May 2019, 11:40 PM | National News |

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಹಿನ್ನೆಲೆ ಇಂದು CWC ಸಭೆಯಲ್ಲಿ, ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ರು. ಆದ್ರೆ ನಿರೀಕ್ಷೆಯಂತೆಯೇ ರಾಹುಲ್ ರಾಜೀನಾಮೆಯನ್ನು ಪಕ್ಷ ತಿರಸ್ಕರಿಸಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಕೇವಲ 52 ಸ್ಥಾನಗಳನ್ನು ಗೆದ್ದಿದ್ದು, ಅದ್ರಲ್ಲೂ ರಾಹುಲ್ ಗಾಂಧಿ ತಮ್ಮ ಭದ್ರಕೋಟೆ ಅಮೇಥಿಯಲ್ಲೇ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತು ಮುಖಭಂಗ ಅನುಭವಿಸಿದ್ದಾರೆ. ಈ ಹಿನ್ನೆಲೆ ತಾವು ಎಡವಿದ್ದು ಎಲ್ಲಿ ಎಂಬ ಬಗ್ಗೆ ಪರಾಮರ್ಶಿಸಲು CWC ಸಭೆ ನಡೆಸಲಾಯ್ತು. ಈ ವೇಳೆ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​​​​ ರಾಜೀನಾಮೆ ನೀಡ್ತಾರೆಂದು ಮೊದಲೇ ಸುದ್ದಿಯಾಗಿತ್ತು. ಅದರಂತೆ ಅವರು ರಾಜೀನಾಮೆ ನೀಡಿದ್ದು, ತಿರಸ್ಕಾರ ಕೂಡ ಆಗಿದೆ.

ಇನ್ನು ಸಭೆಯಲ್ಲಿ ಯಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್​ ಮುಖಂಡರು ಭಾಗಿಯಾಗಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...