ಭಯೋತ್ಪಾದಕ ಆದಿತ್ಯನ ಬ್ಯಾಂಕ್ ಲಾಕರ್ ನಲ್ಲಿ ಸೈನಡ್??

Source: sonews | By Staff Correspondent | Published on 25th January 2020, 10:29 PM | Coastal News | Don't Miss |

ಉಡುಪಿ: ಶಂಕಿತ ಭಯೋತ್ಪಾದಕ ಆದಿತ್ಯ ರಾವ್ ನ ಬ್ಯಾಂಕ್ ಲಾಕರ್ ನಲ್ಲಿ ಎರಡು ಸೈನಡ್ ಪತ್ತೆಯಾಗಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಈ ಸೈನಡ್ ಬಳಸಿ ಮತ್ಯಾವ ಭಯೋತ್ಪಾದಕ ಕೃತ್ಯವನ್ನು ನಡೆಸುವವನಿದ್ದ ಎಂಬ ಆಯಾಮದ ಮೇಲೂ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾಗಿ ಮಾಹಿತಿ ಲಭ್ಯವಾಗಿದೆ.

 ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಇರಿಸಿದ್ದ ಶಂಕಿತ ಉಗ್ರ ಆದಿತ್ಯ ರಾವ್‌ನನ್ನು ತನಿಖೆಯ ಸಂದರ್ಭದಲ್ಲಿ ನೀಡಿದ ಮಾಹಿತಿ ಯಂತೆ ಉಡುಪಿ ಕುಂಜಿಬೆಟ್ಟುವಿನಲ್ಲಿ ಕರ್ಣಾಟಕ ಬ್ಯಾಂಕಿನ ಕುಂಜಿಬೆಟ್ಟು ಶಾಖೆಗೆ ಇಂದು ಕರೆ ತಂದು ಸ್ಥಳ ಮಹಜರು ನಡೆಸಲಾಯಿತು.

ಮಂಗಳೂರು ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡ ಉಡುಪಿ ಪೊಲೀಸರ ಸಹಕಾರದೊಂದಿಗೆ ಕುಂಜಿಬೆಟ್ಟು ಶಾಖೆಗೆ ಕರೆ ತಂದು, ಆತನ ಬ್ಯಾಂಕ್ ಲಾಕರನ್ನು ಪರಿಶೀಲನೆ ನಡೆಸಿದೆ. ಇಂದು ಬ್ಯಾಂಕಿಗೆ ರಜೆ ಇದ್ದುದರಿಂದ ಯಾವುದೇ ಸಮಸ್ಯೆ ಇಲ್ಲದೆ ಕಚೇರಿಯ ಮುಂದಿನ ಶಟರ್ ಹಾಕಿ ಒಳಗಡೆ ಮಹಜರು ಪ್ರಕ್ರಿಯೆ ನಡೆಸಲಾಯಿತು. ಸುಮಾರು ಎರಡು ಗಂಟೆಗಳ ಕಾಲ ಬ್ಯಾಂಕ್ ಒಳಗೆ ಆದಿತ್ಯ ರಾವ್‌ನನ್ನು ವಿಚಾರಣೆಗೆ ಒಳಪಡಿಸಲಾಯಿತು.

ಆದಿತ್ಯ ರಾವ್ ಬಳಿ ಲಾಕರ್‌ನ ಕೀ ಇಲ್ಲದ ಕಾರಣ ಲಾಕರನ್ನು ಒಡೆದು ತೆರೆಯಲಾಯಿತು. ಅದರಲ್ಲಿ ಆತ ಸ್ಟೀಲ್ ಬಾಕ್ಸ್‌ನಲ್ಲಿ ತಂದಿರಿಸಿದ್ದ ಎರಡು ಸೈನೈಡ್ ಗಳು ಪತ್ತೆಯಾಗಿವೆ ಎಂದು ಖಚಿತ ಮೂಲಗಳು ತಿಳಿಸಿವೆ. ಇದನ್ನು ಪೊಲೀಸರು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಆದಿತ್ಯ ರಾವ್ 2018ರಲ್ಲಿ ಬೆಂಗಳೂರಿನಲ್ಲಿ ಹುಸಿ ಕರೆ ಮಾಡಿ ಬಂಧಿತ ನಾಗಿದ್ದು, ಬಿಡುಗಡೆಯಾದ ನಂತರ ಆತ ಜೀವನದಲ್ಲಿ ಜಿಗುಪ್ಸೆ ಹೊಂದಿ ಆನ್ ಲೈನ್ ಮೂಲಕ ಸೈನೈಡ್ ಖರೀದಿಸಿ, ತನ್ನ ಬ್ಯಾಂಕ್ ಲಾಕರ್‌ನಲ್ಲಿ ಇರಿಸಿದ್ದ ಎನ್ನಲಾಗಿದೆ. ಉಳಿದಂತೆ ಈ ಲಾಕರ್‌ನಲ್ಲಿ ಯಾವುದೇ ದಾಖಲೆಗಳು ಪತ್ತೆ ಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಾರ್ಕಳದಲ್ಲೂ ಸ್ಥಳ ಮಹಜರು

ಉಡುಪಿ, ಮಲ್ಪೆಯ ಬಳಿಕ ಮಧ್ಯಾಹ್ನದ ನಂತರ ಆದಿತ್ಯ ರಾವ್‌ನನ್ನು ಆತ ಕೆಲಸಕ್ಕೆ ಇದ್ದ ಹಾಗೂ ಸ್ಪೋಟಕ ತಯಾರಿಸಿದ್ದ ಕಾರ್ಕಳದ ಹೊಟೇಲಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲಾಯಿತು.

ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಸ್ಪೋಟಕ ಇರಿಸುವ ಒಂದು ದಿನದ ಹಿಂದೆ ಕಾರ್ಕಳದ ಹೊಟೇಲೊಂದರಲ್ಲಿ ಕೆಲಸಕ್ಕೆ ಸೇರಿ, ಅಲ್ಲೇ ಸ್ಪೋಟಕಗಳನ್ನು ತಯಾರಿಸಿದ್ದ ಎನ್ನಲಾಗಿದೆ. ಈ ಸಂಬಂಧ ಹೊಟೇಲಿಗೆ ಕರೆದುಕೊಂಡು ಬಂದ ಪೊಲೀಸರು ಆತನಿಂದ ಸ್ಥಳ ಮಹಜರು ನಡೆಸಿ, ಬಳಿಕ ಆತನನ್ನು ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...