ಸೈಬರ್ ಕ್ರೈಮ್ ಜಾಗೃತಿ ಅಗತ್ಯ : ಆರ್.ವಿ.ದೇಶಪಾಂಡೆ

Source: so news | By MV Bhatkal | Published on 15th June 2019, 10:33 PM | Coastal News | Don't Miss |

ಕಾರವಾರ : ಸೈಬರ್ ಅಪರಾದಗಳು ಇತ್ತಿಚಿಗೆ ಹೆಚ್ಚಾಗುತ್ತಿದ್ದು. ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. 
ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಶನಿವಾರ ಪೊಲೀಸ್ ಇಲಾಖೆ ಹೊರತಂದಿರುವ ಸೈಬರ್ ಕ್ರೈಮ್ ಜನಜಾಗೃತಿ ಬಿತ್ತಿ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು. 
ತಂತ್ರಜ್ಞಾನದ ದುರ್ಬಳಕೆ ಹೆಚ್ಚು ಆಗುತಿದ್ದು, ಸಾರ್ವಜನಿಕರು ಮೋಸ ಹೋಗುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅತ್ಯವಶ್ಯಕವಾಗಿದೆ ಎಂದರು. 
ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಪೋನ್ ಕರೆ ಮಾಡಿ ಸಾರ್ವಜನಿಕರಿಂದ ಬ್ಯಾಂಕ್ ವಿವರ ಪಡೆಯಲಾಗುತ್ತದೆ. ನಂತರ ಖಾತೆಯಲ್ಲಿನ ಹಣವನ್ನು ಕಳವು ಮಾಡಲಾಗುತ್ತದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ತಮ್ಮ ವೈಯಕ್ತಿಕ ವಿವರ ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು. ಅನುಮಾನ ಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಬೇಕೆಂದರು. 
ಅಲ್ಲದೇ ಜನರು  ತಾವು ಬಳಸುವ ವಿದ್ಯುನ್ಮಾನ ಸಾಧನಗಳ ಬಗ್ಗೆಯೂ ಎಚ್ಚರದಿಂದಿರಬೇಕೆಂದು ಸಚಿವರು ಹೇಳಿದರು. 
ಸಭೆಯಲ್ಲಿ ಶಾಸಕರಾದ ಸುನೀಲ ನಾಯ್ಕ, ದಿನಕರ ಶೆಟ್ಟಿ, ಜಿ.ಪಂ ಅಧ್ಯಕ್ಷೆ ಜಯಶ್ರೀ ಮೋಗೇರ, ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿ ಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ. ರೋಶನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...