ಬೆಂಬಲ ಬೆಲೆ ಯೋಜನೆಯಡಿ ತೊಗರಿ ಬೆಳೆ ನೊಂದಣಿಗೆ ಡಿ.30 ಡೆಡ್‍ಲೈನ್

Source: SO News | By Laxmi Tanaya | Published on 18th December 2020, 9:55 AM | State News | Don't Miss |

ಬಳ್ಳಾರಿ : ಕೃಷಿ ಮಾರಾಟ ಇಲಾಖೆಯ ವತಿಯಿಂದ 2020-21 ನೇ ಸಾಲಿಗೆ ಮುಂಗಾರು ಹಂಗಾಮಿನಲ್ಲಿ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‍ಗೆ 6 ಸಾವಿರ ರೂ. ರಂತೆ ಖರೀದಿಗಾಗಿ ಜಿಲ್ಲೆಯಲ್ಲಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಟಾಸ್ಕ್‍ಫೋರ್ಸ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ತಿಳಿಸಿದ್ದಾರೆ.

ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‍ಐಡಿಯನ್ನು  ಪಡೆಯುವುದು ಕಡ್ಡಾಯವಾಗಿರುತ್ತದೆ. ರೈತರ ಬಳಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್‍ನಲ್ಲಿ ಯಾವುದಾದರು ಮಾಹಿತಿ ಲಭ್ಯವಿಲ್ಲದಿದ್ದಲ್ಲಿ ಅಥವಾ ತಪ್ಪಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿಯನ್ನು ಪಡೆಯಬಹುದಾಗಿದೆ. ರೈತರು ತಮ್ಮ ಆಧಾರ್ ಕಾರ್ಡ್ (ಮೂಲ),  ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ,  ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಲು ತರಬೇಕು.

ತೊಗರಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ಡಿ.30 ರೊಳಗಾಗಿ ನೊಂದಣಿ ಮಾಡಿ, ಚೀಟಿ ಪಡೆದಿರಬೇಕು. ಪ್ರತಿ ಎಕರೆಗೆ 7.5 ಕ್ವಿಂಟಾಲ್ಗೆ ಗರಿಷ್ಠ ಪ್ರಮಾಣ ಹಾಗೂ ನಿಗಧಿತ ಅವಧಿಯೊಳಗೆ ನೋಂದಣಿಗೊಂಡ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಲಾಗುತ್ತದೆ.
ತೊಗರಿ ಉತ್ಪನ್ನವನ್ನು 2021ರ ಜ.1ರಿಂದ ಜ.31ರವರೆಗೆ ಮಾತ್ರ ಖರೀದಿಸಲಾಗುವುದು.

 ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.
ಕೋವಿಡ್-19 ಹಿನ್ನಲೆಯಲ್ಲಿ ನಿಗದಿತ ಸಾಮಾಜಿಕ ಅಂತರ ಮತ್ತು ನೈರ್ಮಲ್ಯ ಕಾಪಾಡುವುದು ಹಾಗೂ ವೈರಾಣು ಹರಡುವಿಕೆ ತಡೆಗಟ್ಟುವ ಬಗ್ಗೆ ಕೇಂದ್ರ/ರಾಜ್ಯ ಸರ್ಕಾರವು ನೀಡಿರುವ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಖರೀದಿ ಕೇಂದ್ರಗಳು ಮತ್ತು ಅವುಗಳ ಮುಖ್ಯ ಕಾರ್ಯನಿರ್ವಾಹಕರಿಗೆ ಸಂಪರ್ಕಿಸಿ: ಬಳ್ಳಾರಿಯ ರೈತರ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ/ ವ್ಯವಸ್ಥಾಪಕರಾದ ಮೊಹಮ್ಮದ್ ಇಕ್ಬಾಲ್ ಅವರ ದೂ.ಸಂ. 08392267202, ಕೂಡ್ಲಿಗಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಮುಖ್ಯ ಕಾರ್ಯನಿರ್ವಾಹಕರು / ವ್ಯವಸ್ಥಾಪಕರಾದ ಮಂಜುನಾಥ ಪಿ.ಜಿ. ಅವರ ದೂ.ಸಂ. 9902654299, ಕೊಟ್ಟೂರು ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನಿ. ವ್ಯವಸ್ಥಾಪಕರಾದ ಲೊಹಿತ್ ಅವರ ದೂ.ಸಂ. 7760014043, ಹೂವಿನಹಡಗಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಕಾರ್ಯದರ್ಶಿಗಳಾದ ಕೊಟ್ರೇಶ ಅವರ ದೂ.ಸಂ. 9972356911, ಹೂವಿನಹಡಗಲಿ ತಾಲೂಕಿನ ಹೊಳಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಕಾರ್ಯದರ್ಶಿ ಗೌಡಪ್ಪ ಅವರ ದೂ.ಸಂ. 9538833183, ಹರಪನಹಳ್ಳಿ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನಿ. ವ್ಯವಸ್ಥಾಪಕರಾದ ತಿರುಪತಿ ಅವರ ದೂ.ಸಂ. 7338025050, ಹರಪನಹಳ್ಳಿ ತಾಲೂಕಿನ ಅರಸಿಕೆರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಕಾರ್ಯದರ್ಶಿ ಶೀನಪ್ಪ ಅವರ ದೂ.ಸಂ. 7760014043 ಅಥವಾ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದ ಶಾಖಾ ವ್ಯವಸ್ಥಾಪಕರಾದ ಸಯ್ಯದ್ ವಸೀಂ ಪಾಷಾ ಅವರ ದೂ.ಸಂ. 08392267202 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
 ಜಿಲ್ಲೆಯ ರೈತರು ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಈ ಸದುಪಯೋಗವನ್ನು ರೈತರೇ ನೇರವಾಗಿ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...