ದಕ್ಷಿಣಕನ್ನಡ ಜಿಲ್ಲೆ ಕೋಮು ಸೌಹಾರ್ಧತೆ ಕಾಪಾಡಿಕೊಂಡರೆ ರಾಜ್ಯಕ್ಕೆ ಮಾದರಿಯಾಗಲಿದೆ: ಅಬ್ದುಲ್ ಅಝೀಮ್

Source: SO News | By Laxmi Tanaya | Published on 18th January 2021, 10:27 PM | State News |

ಮಂಗಳೂರು : ವಕ್ಫ್ ಭೂಮಿ ಅಕ್ರಮ ಪ್ರಕರಣಗಳ ಬಗ್ಗೆ ಮುಂದಿನ ಸದನದ ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಈ ಬಗ್ಗೆ ವರದಿ ಸರಕಾರಕ್ಕೆ ಸಲ್ಲಿಕೆಯಾಗಿದೆ ಎಂದು‌ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್  ತಿಳಿಸಿದ್ದಾರೆ.

 ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಕೋಮು ಸೌಹಾರ್ದ ಕಾಪಾಡಿಕೊಂಡರೆ ರಾಜ್ಯಕ್ಕೆ ಮಾದರಿಯಾಗಬಹುದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕೋಮು ಸೌಹಾರ್ದ ಕಾಪಾಡಲು ಆಯೋಗ ಪ್ರಥಮ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ಕೋಮು ಸೂಕ್ಷ್ಮ ಜಿಲ್ಲೆ ಗಳಿಗೆ ಅಧಿಕಾರಿಗಳನ್ನು ನೇಮಿಸುವಾಗ ದಕ್ಷ,ಪ್ರಾಮಾಣಿಕ ಸಮರ್ಥ ಅಧಿಕಾರಿಗಳ ಅಗತ್ಯವಿದೆ ಅಂದರು. 

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎನ್.ಬಿ.ಅಬೂಬಕರ್, ಅಲ್ಪ ಸಂಖ್ಯಾತರ ವಿವಿಧ ಸಂಘಟನೆಗಳ ಪ್ರತಿನಿಧಿಗಳಾದ ಬಶೀರ್ ಬೈಕಂಪಾಡಿ, ಹೈದರ್  ಪರ್ತಿಪ್ಪಾಡಿ, ಶಹನವಾಝ್, ಜಮಾಲ್, ಹಮೀದ್, ಅಸ್ಗರ್ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...