ದಕ್ಷಿಣಕನ್ನಡ: ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು. ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ.

Source: SO News | By Laxmi Tanaya | Published on 23rd November 2020, 10:16 PM | Coastal News | Don't Miss |

ಮಂಗಳೂರು : ಕಾಲೇಜುಗಳು ಆರಂಭವಾಗಿ ವಾರವಾಗಿದ್ದು, ದ.ಕ.ದಲ್ಲಿ 29 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ. ಇದರಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳೂ ಸೇರಿದ್ದಾರೆ.

ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಮಂಗಳೂರಿಗೆ ಬಂದ 6 ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿ ಸಿಗುವಾಗ ವಿಳಂಬವಾಗಿದೆ. ಶನಿವಾರ ರಾತ್ರಿವರೆಗೆ 16,441 ವಿದ್ಯಾರ್ಥಿಗಳ ಕೋವಿಡ್‌ ತಪಾಸಣೆ ಪರೀಕ್ಷೆ ನಡೆಸಿದ್ದು, 29 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಅವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದ್ದು, 8 ಖಾಸಗಿ ಹಾಗೂ ಒಂದು ಸರಕಾರಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಭಾನುವಾರ ಕೋವಿಡ್‌ ಪರೀಕ್ಷೆ ನಿಧಾನಗತಿಯಲ್ಲಿ ಸಾಗಿದೆ. ಸೋಮವಾರದ ಬಳಿಕ ಮತ್ತೆ ಚುರುಕಾಗಲಿದೆ ಎಂದು ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...