ಉ.ಪ್ರ.: ದಲಿತ ವಿದ್ಯಾರ್ಥಿಯ ಥಳಿಸಿ ಹತ್ಯೆಗೈದ ಅಧ್ಯಾಪಕ

Source: Vb | By I.G. Bhatkali | Published on 27th September 2022, 7:41 AM | National News |

ಲಕ್ನೋ: ಪ್ರಬಲ ಜಾತಿಯ ಶಿಕ್ಷಕರೊಬ್ಬರು 10ನೇ ತರಗತಿಯ ದಲಿತ ವಿದ್ಯಾರ್ಥಿಯನ್ನು ಥಳಿಸಿ ಹತ್ಯೆಗೈದ ಘಟನೆ ಉತ್ತರಪ್ರದೇಶದ ಔರೈಯಾ ಜಿಲ್ಲೆಯ ಆದರ್ಶ್‌ ಇಂಟರ್‌ ಕಾಲೇಜಿನಲ್ಲಿ ನಡೆದಿದೆ.

ಈ ಘಟನೆ ಸೆ.7ರಂದು ನಡೆದಿದೆ. ದಲಿತ ವಿದ್ಯಾರ್ಥಿ ನಿಖಿಲ್ ದೊನ್ನೆ ಪರೀಕ್ಷೆಯಲ್ಲಿ ಸಣ್ಣ ತಪ್ಪು ಮಾಡಿದ್ದ ಈ ಹಿನ್ನೆಲೆಯಲ್ಲಿ ಸಮಾಜ ವಿಜ್ಞಾನ ಅಧ್ಯಾಪಕ ಅಶ್ವಿನಿ ಸಿಂಗ್ ಆತನಿಗೆ ಥಳಿಸಿದ್ದಾರೆ. ಇದರಿಂದ ಗಂಭೀರ ಗಾಯಗೊಂಡಿದ್ದ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದಿನ ಕಳೆದಂತೆ ಆತನ ಆರೋಗ್ಯ ಸ್ಥಿತಿ ಹದ ಗೆಟ್ಟು ಆತ ಸಾವನಪ್ಪಿದ.

ಟ್ವಿಟರ್‌ನ 'ದಲಿತ್ ವಾಯ್ಸ್' ಎಂಬ ಅಧಿಕೃತ ಪೇಜ್ ಈ ಹೃದಯ ವಿದ್ರಾವಕ ಘಟನೆಯನ್ನು ಶೇರ್ ಮಾಡಿಕೊಂಡಿದೆ. “ಉತ್ತರಪ್ರದೇಶದ ಔರೈಯಾದಲ್ಲಿ ಸಂಭವಿಸಿದ ಇದು ತೀವ್ರ ನೋವಿನ ಸಂಗತಿ. ಆದರ್‌ ಇಂಟರ್ ಕಾಲೇಜಿನ 10ನೇ ತರಗತಿಯ ದಲಿತ ವಿದ್ಯಾರ್ಥಿಯನ್ನು ಪ್ರಬಲ ಜಾತಿಯ ಅಧ್ಯಾಪಕ ಅಶ್ವಿನಿ ಸಿಂಗ್ ಥಳಿಸಿ ಹತ್ಯೆಗೈದಿದ್ದಾರೆ. ಅಚ್ಚಾಲ್ದಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ' ಎಂದು ಅದು ಟ್ವಿಟ್ ಮಾಡಿದೆ. ವಿದ್ಯಾರ್ಥಿಯ ಸಾವಿನ ಕಾರಣವನ್ನು ತನಿಖೆ ಮಾಡಲು ವೀಡಿಯೊ ದೃಶ್ಯಾವಳಿ ಹಾಗೂ ಮಾಹಿತಿಯ ಕುರಿತು ಪೊಲೀಸರ ತಂಡ ಇಟಾವ ಜಿಲ್ಲಾಧಿಕಾರಿ ಕಚೇರಿಯೊಂದಿಗೆ ಮಾತುಕತೆ ನಡೆಸಿದೆ ಎಂದು ಔರೈಯಾದ ಪೊಲೀಸ್ ಅಧೀಕ್ಷಕ ಚಾರು ನಿಗಮ್ ಅವರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಆರೋಪಿಯನ್ನು ಬಂಧಿಸಲು ವಿಶೇಷ ತನಿಖಾ ತಂಡ ರೂಪಿಸಲಾಗಿದೆ. ಶೀಘ್ರ ನ್ಯಾಯ ನೀಡಲಾಗುವುದು ಎಂದು ನಿಗಮ್ ಅವರು ತಿಳಿಸಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...