ತೆಲಂಗಾಣ: ಸರಕಾರಿ ವಸತಿ ಶಾಲೆಯಲ್ಲಿ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ

Source: Vb | By I.G. Bhatkali | Published on 10th March 2023, 10:32 PM | National News |

ಹೈದರಾಬಾದ್: ತೆಲಂಗಾಣದ ನಾಗಕರ್ನೂಲು ಜಿಲ್ಲೆಯಲ್ಲಿಯ ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

ಸೋಮವಾರ ಈ ಘಟನೆ ನಡೆದಿದ್ದು, ಶಾಲೆಯ ವಿರುದ್ದ ಪ್ರತಿಭಟನೆ ಭುಗಿಲೆದ್ದಿತ್ತು. ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿಯ ಕಿರುಕುಳ ತಮ್ಮ ಪುತ್ರಿಯ ಆತ್ಮಹತ್ಯೆಗೆ ಕಾರಣ ಎಂದು ಮೃತ ನಿಖಿತಾ(13)ಳ ಹೆತ್ತವರು ಆರೋಪಿಸಿದ್ದಾರೆ. ಅಮ್ರಾಬಾದ ಪೊಲೀಸರು ಶಂಕಾಸ್ಪದ ಸಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ನಿಖಿತಾ ತನ್ನ ಸ್ನೇಹಿತೆಯರೊಂದಿಗಿನ ತಪ್ಪು ತಿಳುವಳಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಾಲಾ ಆಡಳಿತ ಮಂಡಳಿಯು ಹೇಳಿರುವುದನ್ನು ಮಾಧ್ಯಮಗಳು ಉಲ್ಲೇಖಿಸಿವೆ. ಆದರೆ ನಿಖಿತಾ ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿಯಿಂದ ಕಿರುಕುಳಕ್ಕೊಳಗಾಗಿದ್ದಳು ಎಂದು ಹೆತ್ತವರು ಮತ್ತು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ನಿಖಿತಾಳ ಸಾವಿನ ಹಲವಾರು ಗಂಟೆಗಳ ಬಳಿಕವಷ್ಟೇ ಹೆತ್ತವರಿಗೆ ಮಾಹಿತಿ ನೀಡಲಾಗಿತ್ತು ಎಂದೂ ಅವರು ದೂರಿದ್ದಾರೆ.

ಸೋಮವಾರ ಮಧ್ಯಾಹ್ನ ಎರಡು ಗಂಟೆಗೆ ನಿಖಿತಾ ಮೃತಪಟ್ಟಿದ್ದಳು, ಆದರೆ ಸಂಜೆ ಏಳು ಗಂಟೆಯ ಸುಮಾರಿಗೆ ಹೆತ್ತವರಿಗೆ ಮಾಹಿತಿ ನೀಡಲಾಗಿತ್ತು. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸುವಾಗ ಮಧ್ಯರಾತ್ರಿ ಕಳೆದಿತ್ತು ಎಂದು ಬಿಎಸ್‌ಪಿ ನಾಯಕ ಶ್ರೀನಿವಾಸಲು ಹೇಳಿದರು. ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಲಾಠಿ ಪ್ರಹಾರ ನಡೆಸಿದರು ಎಂದೂ ಅವರು ಆರೋಪಿಸಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...