ಶಿಕ್ಷಕಿ ದಲಿತೆ ಎಂಬ ಕಾರಣಕ್ಕೆ ಗ್ರಾಮಸ್ಥರಿಂದ ಅಂಗನವಾಡಿ ಪ್ರವೇಶಕ್ಕೆ ನಿರಾಕರಣೆ; ನಾಳೆ ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಹಾರ: ನಟರಾಜ್

Source: Vb | By I.G. Bhatkali | Published on 30th July 2023, 8:50 AM | State News | National News |

ಬೆಂಗಳೂರು: ಅಂಗನವಾಡಿ ಶಿಕ್ಷಕಿಯೊಬ್ಬರಿಗೆ ದಲಿತೆ ಎಂಬ ಕಾರಣಕ್ಕೆ ಗ್ರಾಮಸ್ಥರು ಕೇಂದ್ರಕ್ಕೆ ಪ್ರವೇಶ ನಿರಾಕರಿಸಿರುವ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಿನ ಮಳೆಕೋಟೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

“ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಜು.31ರಂದು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಿ ಶಿಕ್ಷಕಿಗೆ ಕೆಲಸಕ್ಕೆ ಅನುವು ಮಾಡಿಕೊಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಟರಾಜ್.ಎಸ್ ತಿಳಿಸಿದ್ದಾರೆ.

ಶನಿವಾರ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೆಳೆಕೋಟೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರಿಗೆ ಮನವರಿಕೆ ಮಾಡಿ ಶಿಕ್ಷಕಿಗೆ ಕೆಲಸ ಮಾಡಲು ಅನುವು ಮಾಡಿಕೊಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿಕುಮಾರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪರಿಶಿಷ್ಠ ಜಾತಿಗೆ ಸೇರಿದ ಶಿಕ್ಷಕಿ ಆನಂದಮ್ಮ ರಾಜಘಟ್ಟದಲ್ಲಿ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಅಂಗನವಾಡಿ ಶಿಕ್ಷಕಿಯಾಗಿ ಭಡ್ತಿ ನೀಡಿ, ಮೆಳೆಕೋಟೆ ಗ್ರಾಮಕ್ಕೆ 2022ರ ಸೆಪ್ಟೆಂಬರ್‌ನಲ್ಲಿ ವರ್ಗಾವಣೆ ಮಾಡಲಾಗಿತ್ತು.10 ತಿಂಗಳಿಂದ ಅವರು ಕೇಂದ್ರಕ್ಕೆ ಪ್ರವೇಶಿಸಲಾಗದೇ ಹೊರಗೇ ನಿಲ್ಲುತ್ತಿದ್ದಾರೆಂದು ತಿಳಿದುಬಂದಿದೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...