ದಮಾಮ್ : ''ನಮ್ಮ ಪ್ರವಾದಿ (ಸ.ಅ.)'' ಸಾರ್ವಜನಿಕ ಪ್ರವಾದಿ ಸಂದೇಶ ಪ್ರಚಾರ ಕಾರ್ಯಕ್ರಮ

Source: iff dammam | By Arshad Koppa | Published on 26th January 2017, 12:43 AM | Gulf News | Special Report |

ದಮಾಮ್, ಡ: ಇಂಡಿಯಾ ಫ್ರೆಟರ್ನಿಟಿ ಫೋರಮ್, ಈಸ್ಟರ್ನ್ ಪ್ರೊವಿನ್ಸ್ ಕರ್ನಾಟಕ ಘಟಕದ ವತಿಯಿಂದ ''ನಮ್ಮ ಪ್ರವಾದಿ (ಸ.ಅ.)'' ಸಾರ್ವಜನಿಕ ಪ್ರವಾದಿ ಸಂದೇಶ ಪ್ರಚಾರ ಕಾರ್ಯಕ್ರಮವು ಇತ್ತೀಚೆಗೆ ಸೌದಿಅರೇಬಿಯದ ಆಲ್‌ಖೊಬರ್ನ ಗಲ್ಫ್ ದರ್ಬಾರ್ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಪ್ರಭಾಷಣವನ್ನು ನಡೆಸಿದ ಇಂಡಿಯಾ ಫ್ರೆಟರ್ನಿಟಿ ಫೋರಮ್, ಈಸ್ಟರ್ನ್ ಪ್ರೊವಿನ್ಸ್ ಕರ್ನಾಟಕ ಘಟಕದ ಸದಸ್ಯ ಮುಹಮ್ಮದ್ ಅಜ಼ರುದ್ದೀನ್ '' ನಮ್ಮ ಪ್ರವಾದಿ (ಸ.ಅ.) ಇಡೀ ಮನುಕುಲವನ್ನು ಸಂಸ್ಕರಣೆ ನಡೆಸಿದರು. ಆದ್ದರಿಂದ ಅವರನ್ನು ಇಂದು ಇಡೀ ಜಗತ್ತು ಮನುಕುಲದ ವಿಮೋಚಕ ಎಂದು ಕೊಂಡಾಡುತ್ತಿದೆ ಎಂದರು.


ಒಂದು ಅತ್ಯುತ್ತಮ ಸಮುದಾಯ ನಿರ್ಮಾಣಕ್ಕಾಗಿ ಪ್ರವಾದಿ ಮುಹಮ್ಮದ್ (ಸ.ಅ.) ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು ಮಾತ್ರವಲ್ಲದೆ, ತನ್ನ ಜೊತೆಗಿರುವ ಸಂಗಾತಿಗಳನ್ನೂ ತರಬೇತುಗೊಳಿಸಿದರು. ಒಳಿತಿನ ಆದೇಶ ನೀಡುವುದರೊಂದಿಗೆ ಕೆಡುಕನ್ನು ತಡೆಯುವ ಕಾರ್ಯವನ್ನು ಪ್ರವಾದಿ ಮುಹಮ್ಮದ್ (ಸ.ಅ.) ನಿರ್ವಹಿಸಿದರು. ಅವರನ್ನು ಅನುಸರಿಸುವವರು ಕೂಡಾ ಇದೇ ರೀತಿಯ ಗುಣಸ್ವಭಾವವನ್ನು ಹೊಂದಿರುತ್ತಾರೆ ಎಂದು ಪವಿತ್ರ ಕುರ್ ಆನ್ ನಮಗೆ ಸೂಚ್ಯವಾಗಿ ತಿಳಿಸುತ್ತಿದೆ. ಇದರರ್ಥ ಪ್ರವಾದಿವರ್ಯರ ಜೀವನ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ನಾವು ಅವರ ನೈಜ ಅನುಯಾಯಿಗಳು ಸಾಧ್ಯ'' ಎಂದು ಅಜ಼ರುದ್ದೀನ್ ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಂಡಿಯಾ ಫ್ರೆಟರ್ನಿಟಿ ಫೋರಮ್, ಈಸ್ಟರ್ನ್ ಪ್ರೊವಿನ್ಸ್ ಕರ್ನಾಟಕ ಘಟಕದ ಕಾರ್ಯದರ್ಶಿ ಮುಹಮ್ಮದ್ ಅಥಾವುಲ್ಲಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಹಮ್ಮದ್ ಇಸಾಖ್, ಜಮೀಯ್ಯತುಲ್ ಫಲಾಹ್ ಉಪಾಧ್ಯಕ್ಷ ನಿಜ಼ಾಮುದ್ದೀನ್ ಶೇಖ್ ಉಪಸ್ಥಿತರಿದ್ದರು. 
ಮುಹಮ್ಮದ್ ಬಶೀರ್ ಕಿರಾಅತ್ ಪಠಿಸಿದರು. ಮುಹಮ್ಮದ್ ನಿಸಾಫ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಹಮ್ಮದ್ ಅಸ್ಗರ್ ಧನ್ಯವಾದ ಸಲ್ಲಿಸಿದರು. ಮುಹಮ್ಮದ್ ಸುನೈಫ್ ಕಾರ್ಯಕ್ರಮ ನಿರೂಪಿಸಿದರು.

ಇಂಡಿಯಾ ಫ್ರಟರ್ನಿಟಿ ಫೋರಮ್ 
ಈಸ್ಟರ್ನ್ ಪ್ರೊವಿನ್ಸ್,  ಕರ್ನಾಟಕ- ಸೌದಿಅರೇಬಿಯ. 
For further details please send e-mail to [email protected]

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...