ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ಯಶಸ್ವಿಗೊಂಡ ದಾಂಡೇಲಿ ಪೇಪರ್ ಮಿಲ್ ನ ಕಾರ್ಮಿಕ ವೇತನ ಪರಿಷ್ಕರಣಾ ಸಂಧಾನ ಸಭೆ

Source: SO News | By Laxmi Tanaya | Published on 12th September 2021, 10:28 PM | Coastal News | Don't Miss |

ಯಲ್ಲಾಪುರ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ  ಶಿವರಾಮ ಹೆಬ್ಬಾರ್ ಅವರ ನೇತೃತ್ವದ ಭಾನುವಾರ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ  ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನ ಕಾರ್ಮಿಕರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿ ಪ್ರತಿನಿಧಿಗಳು ಹಾಗೂ ಜಂಟಿ ಸಂಧಾನ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿದರು.

ಆಡಳಿತ ಮಂಡಳಿ ಪ್ರತಿನಿಧಿ ಹಾಗೂ ಜಂಟಿ ಸಂಧಾನ ಸಮಿತಿಯ ಸದಸ್ಯರೊಂದಿಗೆ ಪ್ರಮುಖರೊಂದಿಗೆ ಸುದೀರ್ಘವಾಗಿ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಚರ್ಚಿಸಿದರು, ಹಲವಾರು ವರ್ಷಗಳಿಂದ ಉಲ್ಬಣಿಸಿದ ಸಮಸ್ಯೆಯನ್ನು ಮಾನ್ಯ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಅತ್ಯಂತ ಯಶಸ್ವಿಯಾಗಿ ಕೊನೆಗೊಳಿಸಿದರು.

ಈ ಸಂಸ್ಥೆಯಲ್ಲಿ 2000 ಕ್ಕೂ ಹೆಚ್ಚಿನ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದು ಕಾರ್ಮಿಕ ವೇತನದಲ್ಲಿ ರೂಪಾಯಿ 4100 ಗಳನ್ನು ಏರಿಕೆ ಮಾಡಲು ಅಡಳಿತ ಮಂಡಳಿಯವರು ಒಪ್ಪಿದ್ದು ಅಂದಾಜು ಪ್ರತಿವರ್ಷ 9.8 ಕೋಟಿ ಮೊತ್ತದ ಸೌಲಭ್ಯಗಳನ್ನು ಕಾರ್ಮಿಕರುಗಳಿಗೆ ಈ ಒಪ್ಪಂದದಿಂದ ಪಡೆದುಕೊಳ್ಳಲಿದ್ದಾರೆ ಹಾಗೂ ರಾಜ್ಯದಲ್ಲಿ ಕಾರ್ಮಿಕ ಹಾಗೂ ಉದ್ಯಮಿ ಸ್ನೇಹಿ ವಾತಾವರಣವನ್ನು ನಿರ್ಮಾಣ ಮಾಡುವುದಕ್ಕೆ ಕಾರ್ಮಿಕ ಇಲಾಖೆ‌ ಸದಾ ಬದ್ದವಾಗಿದೆ ಎಂದರು.

ಈ ಸಂದರ್ಭದಲ್ಲಿ ಬೆಳಗಾವಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ಜಂಟಿ ಸಂಧಾನ ಸಮಿತಿ ಸದಸ್ಯ  ಬಿ.ಡಿ.ಹಿರೇಮಠ, ಶ್ರೀನಿವಾಸ ಘೋಟ್ನೇಕರ, ಉದಯ ನಾಯ್ಕ, ಭರತ ಪಾಟೀಲ್ ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳಾದ ರಾಜೇಂದ್ರ ಜೈನ್, ಎಸ್.ಎನ್.ಪಾಟೀಲ್, ರಮೇಶ್ ಬಿಜಾಪುರ, ವಿಜಯ ಮಹಾಂತೇಶ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...