ದಾವಣಗೆರೆ: ಯುವಕನ ಬರ್ಬರ ಕೊಲೆ

Source: sonews | By sub editor | Published on 27th October 2018, 4:27 PM | State News | Incidents | Don't Miss |

ದಾವಣಗೆರೆ: ಯುವಕನೋರ್ವನನ್ನು ಮಾರಕಾಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಹರಿಹರ ತಾಲೂಕಿನ ವಿದ್ಯಾನಗರ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕೊಲೆಯಾದ ಯುವಕನ ಗುರುತು ಪತ್ತೆಯಾಗಿಲ್ಲ.

ವಿದ್ಯಾನಗರದ ನೌಕರರ ಲೇಔಟ್‌ನ ರಸ್ತೆಯಲ್ಲಿ ಈ ಹತ್ಯೆ ನಡೆದಿದೆ. ಯುವಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ. ಕೊಲೆಯಾದ ಯುವಕ ಕೈಯ ಮೇಲೆ ‘ಸಂತು’ ಎಂದು ಹಚ್ಚೆ ಹಾಕಿಸಿಕೊಂಡಿದ್ದಾನೆ. ಆತನ ಗುರುತುಪತ್ತೆ ಇನ್ನಷ್ಟೇ ಆಗಬೇಕಿದೆ.

ಘಟನಾ ಸ್ಥಳಕ್ಕೆ ಹರಿಹರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮುಂದುವರಿದಿದೆ.

Read These Next

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...