ದಾವಣಗೆರೆ: ಮಾನವ ಜೀವನಕ್ಕೆ ಧರ್ಮ ದಿಕ್ಸೂಚಿ : ಶ್ರೀ ರಂಭಾಪುರಿ ಜಗದ್ಗುರುಗಳು 

Source: balanagoudra | By Arshad Koppa | Published on 22nd July 2017, 11:27 AM | State News | Guest Editorial |

ದಾವಣಗೆರೆ ಜುಲೈ 21. ಯಾವಾಗಲೂ ನಾಶವಾಗದೇ ಇರುವುದು ಧರ್ಮ. ಇದನ್ನು ನಾಶ ಮಾಡುವ ಶಕ್ತಿ ಯಾರಿಗೂ ಯಾವ ಕಾಲಕ್ಕೂ ಇರುವುದಿಲ್ಲ. ಮಾನವ ಜೀವನಕ್ಕೆ ಧರ್ಮ ದಿಕ್ಸೂಚಿಯಾಗಿ ಬದುಕನ್ನು ಶ್ರೀಮಂತಗೊಳಿಸುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ|| ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.
    ಅವರು ನಗರದ ಶ್ರೀಮದಭಿನವ ರೇಣುಕ ಮಂದಿರದಲ್ಲಿ ಜರುಗುತ್ತಿರುವ ಶ್ರೀ ರಂಭಾಪುರಿ ಜಗದ್ಗುರುಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮ ಸಮಾವೇಶದ 4ನೇ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
    ಉದಾತ್ತ ಜೀವನ ಮೌಲ್ಯಗಳನ್ನು ಸಂಪಾದಿಸಿಕೊಂಡು ಸನ್ಮಾರ್ಗದಲ್ಲಿ ನಡೆಯುವುದೇ ನಿಜವಾದ ಧರ್ಮ. ಧರ್ಮವೆಂದರೆ ಆಚರಣೆ ವಿನ: ಮಾತಲ್ಲ. ತಾನು ಎಲ್ಲರಿಗಾಗಿ ಅನ್ನವುದು ಧರ್ಮ. ಎಲ್ಲರೂ ತನಗಾಗಿ ಅನ್ನುವುದು ಅಧರ್ಮ. ಹೆತ್ತ ತಾಯಿ ಹೊತ್ತ ನೆಲ ಎಷ್ಟು ಮುಖ್ಯವೋ ಮನುಷ್ಯನಿಗೆ ಧರ್ಮ ಅಷ್ಟೇ ಮುಖ್ಯ. ಮನೆಗೆ ಕಂಪೌಂಡ, ತೋಟಕ್ಕೆ ಬೇಲಿ ಇದ್ದಂತೆ ಮಾನವ ಜೀವನಕ್ಕೆ ಧರ್ಮ ಬೇಲಿ ಇದ್ದಂತೆ. ಹಸಿದವನಿಗೆ ಅನ್ನ, ಬಾಯಾರಿದವನಿಗೆ ನೀರು, ಕುರುಡನಿಗೆ ಕಣ್ಣು ಪಕ್ಷಿಗೆ ರೆಕ್ಕೆ ಇದ್ದ ಹಾಗೆ ಮನುಷ್ಯನಿಗೆ ಧರ್ಮವಿದೆ. ಧರ್ಮದಲ್ಲಿ ಮಾರ್ಗವಿದೆ; ವೇಗವಿಲ್ಲ. ಆದರೆ ವಿಜ್ಞಾನದಲ್ಲಿ ವೇಗವಿದೆ; ಮಾರ್ಗವಿಲ್ಲ. ಧರ್ಮ ಮತ್ತು ವಿಜ್ಞಾನ ಸಮನ್ವಯದಿಂದ ಕೆಲಸ ಮಾಡಿದರೆ ಅದ್ಭುತ ಪ್ರಗತಿ ಸಾಧಿಸಲು ಸಾಧ್ಯ. ಅಂತರಂಗ ಮತ್ತು ಬಹಿರಂಗ ಶುದ್ಧಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರು ವೀರಶೈವ ತತ್ವ ತ್ರಯಗಳಲ್ಲಿ ಸ್ಪಷ್ಟವಾಗಿ ಬೋಧಿಸಿದ್ದಾರೆ ಎಂದರು. 
    ಖ್ಯಾತ ಲೆಕ್ಕ ಪರಿಶೋಧಕ ಬಿ.ಜಿ. ಒಡೆಯರ್ ಅವರಿಗೆ ‘ ಸತ್ಪಥ ಸಾಧನಾ ರತ್ನ’ ಪ್ರಶಸ್ತಿಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಪ್ರದಾನ ಮಾಡಿ ಶುಭ ಹಾರೈಸಿದರು. 
    ಆವರಗೊಳ್ಳದ ಓಂಕಾರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಮಾನವತೆಯಿಂದ ದೈವತ್ವದ ಕಡೆಗೆ ಕರೆದೊಯ್ಯುವ ಮಾರ್ಗವೇ ಸಂಸ್ಕøತಿ. ಸಮಾಜದ ಓರೆ ಕೋರೆಗಳನನು ತಿದ್ದಿ ತೀಡಿ ಮುನ್ನಡೆಸುವುದೇ ಧರ್ಮ ಪೀಠಗಳ ಧ್ಯೇಯವಾಗಿದೆ ಎಂದರು.
     ನೇತೃತ್ವ ವಹಿಸಿದ ಎಸಳೂರು ತೆಂಕಲಗೂಡು ಬೃಹನ್ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಸಂಪತ್ತು ಬೆಳೆದಂತೆ ಸಂಸ್ಕøತಿ ಬೆಳೆಯಬೇಕಾಗಿದೆ. ಧರ್ಮ ಸಂಸ್ಕøತಿ ಸದ್ವಿಚಾರಗಳೂ ಜೀವನದ ಶ್ರೇಯಸ್ಸಿಗೆ ಕಾರಣ. ಗಂಡು ಹೆಣ್ಣು, ಉಚ್ಛ ನೀಚ, ಬಡವ ಬಲ್ಲಿದ ಎನ್ನದೇ ವೀರಶೈವ ಧರ್ಮದ ಪಂಚಪೀಠಗಳು ಧರ್ಮ ಸಂಸ್ಕøತಿ ಕಟ್ಟಿ ಬೆಳೆಸುವ ಮಹತ್ಕಾರ್ಯ ಮಾಡುತ್ತಲೇ ಬಂದಿವೆ ಎಂದರು. 
    ಬಿ. ಚಿದಾನಂದಪ್ಪ, ಯಶವಂತರಾವ್ ಜಾಧವ, ಹೆಚ್.ಬಿ. ಮಂಜಪ್ಪ, ಕೆ.ಎಸ್. ಮಂಜುನಾಥ, ಸಿ.ಹೆಚ್. ಹಿರೇಗೌಡ್ರು, ಜಿ.ಶಿವಯೋಗಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. 
    ಹಲವಾರು ಗಣ್ಯರಿಗೆ ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗೌರವ ಗುರುರಕ್ಷೆ ನೀಡಿ 
ಆಶೀರ್ವದಿಸಿದರು. 
    ಬನ್ನೂರು ವಿಶ್ವನಾಥ ಸ್ವಾಗತಿಸಿದರು. ವೀರಣ್ಣ ಶೆಟ್ಟರ್ ನಿರೂಪಿಸಿದರು. ಗದುಗಿನ ಗಾನಭೂಷಣ ವೀರೇಶ ಕಿತ್ತೂರ ಅವರಿಂದ ಸಂಗೀತ ಸೌರಭ ಜರುಗಿತು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...