ಯಡಿಯೂರಪ್ಪರ ರಾಜಿನಾಮೆಯಿಂದ ಹೃದಯಘಾತಕ್ಕೊಳಗಾದ ವ್ಯಕ್ತಿ ಸಾವು 

Source: sonews | By Staff Correspondent | Published on 20th May 2018, 10:22 PM | State News | Incidents | Don't Miss |

ಚನ್ನಗಿರಿ: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಸುದ್ಧಿ ಕೇಳಿ ವೀರಶೈವ ಲಿಂಗಾಯತ ಮುಖಂಡರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಘಟನೆ ನಡೆದಿದೆ.

ತಾಲೂಕಿನ ಸಂತೇಬೆನ್ನೂರು ಗ್ರಾಮದ ಹುಣಸೆಮರದ ಚನ್ನಬಸಪ್ಪ (70) ಮೃತಪಟ್ಟ ವ್ಯಕ್ತಿ. ಚನ್ನಬಸಪ್ಪ ವೀರಶೈವ ಲಿಂಗಾಯತ ಮುಖಂಡರಾಗಿದ್ದು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗ ಸಂಭ್ರಮಾಚರಣೆ ಮಾಡಿ, ಸಂಬಂಧಿಕರಿಗೆ ಪೋನ್ ಮಾಡಿ ಸಂತೋಷ ಹಂಚಿಕೊಂಡಿದ್ದರು. ಆದರೆ, ಶನಿವಾರ ಸಂಜೆ ಬಿ.ಎಸ್.ಯಡಿಯೂರಪ್ಪನವರು ಬಹುಮತ ಸಾಬೀತು ಮಾಡಲಾಗದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿಯನ್ನು ಟಿವಿಯಲ್ಲಿ ನೋಡುತ್ತಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಮೃತರು ಪತ್ನಿ, ನಾಲ್ಕು ಮಕ್ಕಳು ಮತ್ತು ಮೊಮ್ಮಕ್ಕಳನ್ನು ಆಗಲಿದ್ದಾರೆ. ಭಾನುವಾರ ತಮ್ಮ ಜಮೀನಿನಲ್ಲಿಯೇ ಅವರ ಶವಸಂಸ್ಕಾರವನ್ನು ನೇರವೇರಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅಂತ್ಯಸಂಸ್ಕಾರದಲ್ಲಿ ನೂತನ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತಿತರರು ಪಾಲ್ಗೊಂಡಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...