ಜಾಮೀನು ಅರ್ಜಿ ವಿಚಾರಣೆಗೆ ಮೊದಲೇ ಈ.ಡಿ.ಯಿಂದ ಸಿಸೋಡಿಯಾ ಬಂಧನ

Source: Vb | By I.G. Bhatkali | Published on 10th March 2023, 10:16 PM | National News |

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಶುಕ್ರವಾರ ವಿಚಾರಣೆಗೆ ಬರುವುದಕ್ಕಿಂತ ಒಂದು ದಿನ ಮೊದಲು ಆಮ್ ಆದ್ಮಿ ಪಕ್ಷದ ನಾಯಕ ಮನೀಷ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಈಗ ರದ್ದುಗೊಳಿಸಲಾದ ದಿಲ್ಲಿ ಅಬಕಾರಿ ನೀತಿ ಹಗರಣದ ಕುರಿತಂತೆ ಮನೀಷ್ ಸಿಸೋಡಿಯಾ ಅವರನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.

ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವ ಒಂದು ದಿನ ಮೊದಲೇ ಬಂಧನ ನಡೆದಿರುವುದು ಸಿಸೋಡಿಯಾ ಅವರನ್ನು ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿಸಿದೆ.

ಸಿಸೋಡಿಯಾ ಅವರನ್ನು ಫೆಬ್ರವರಿ 26ರಂದು ಬಂದಿಸಿ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿತ್ತು. ಸಿಬಿಐ ಕಸ್ಟಡಿ ಪೂರ್ಣಗೊಂಡ ಬಳಿಕ ನ್ಯಾಯಾಂಗ ಬಂಧನದ ಅಡಿಯಲ್ಲಿ ಅವರನ್ನು ದಿಲ್ಲಿಯ ತಿಹಾರ್ ಕಾರಾಗೃಹದಲ್ಲಿ ಇರಿಸಲಾಗಿತ್ತು.

“ಮನೀಷ್ ಸಿಸೋಡಿಯಾ ಅವರನ್ನು ಸಿಬಿಐ ಮೊದಲು ಬಂಧಿಸಿತ್ತು. ದಾಳಿಯ ಸಂದರ್ಭ ಸಿಬಿಐಗೆ ಯಾವುದೇ ಸಾಕ್ಷಿಯಾಗಲಿ, ನಗದಾಗಲಿ ದೊರಕಿರಲಿಲ್ಲ. ಅವರ ಜಾಮೀನು ಅರ್ಜಿ ನಾಳೆ ವಿಚಾರಣೆ ನಡೆಯಲಿತ್ತು. ಅವರು ನಾಳೆ ಬಿಡುಗಡೆಯಾಗಲಿದ್ದರು. ಆದುದರಿಂದ ಜಾರಿ ನಿರ್ದೇಶನಾಲಯ ಅವರನ್ನು ಇಂದು ಬಂಧಿಸಿದೆ. ಪ್ರತೀ ದಿನ ಹೊಸ ನಕಲಿ ಪ್ರಕರಣಗಳನ್ನು ಸೃಷ್ಟಿಸುವ ಮೂಲಕ ಯಾವುದೇ ರೀತಿಯಿಂದಾದರೂ ಸಿಸೋಡಿಯಾ ಅವರನ್ನು ಕಾರಾಗೃಹದಲ್ಲೇ ಇರಿಸುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಇದನ್ನು ಜನರು ನೋಡುತ್ತಿದ್ದಾರೆ. ಅವರು ಉತ್ತರ ನೀಡಲಿದ್ದಾರೆ'' ಎಂದು ಕೇಜ್ರಿವಾಲ್ ಅವರು ಎಂದು ಸಂಜೆ ಟ್ವಿಟ್ ಮಾಡಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...