ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ- ಕ್ರಮಕ್ಕೆ ಡಿಸಿ ಸೂಚನೆ

Source: so news | Published on 12th November 2019, 12:34 AM | State News | Don't Miss |

 

ಮಂಗಳೂರು:ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಜಿಲ್ಲೆಯಾದ್ಯಂತ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಆದ್ಯತೆ ನೀಡಬೇಕು. ಶಾಶ್ವತ ಬ್ಯಾರಿಕೇಡ್‍ಗಳ ನಿರ್ಮಾಣ, ರಸ್ತೆ ಗುಂಡಿಗಳ ಮುಚ್ಚುವಿಕೆ, ಬೀದಿ ದೀಪಗಳನ್ನು ಸರಿಪಡಿಸುವ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ  ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತಾನಾಡಿದ ಅವರು ನಾಗರಿಕರ ಹಿತದೃಷ್ಟಿಯಿಂದ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇದೆ. ರಸ್ತೆಗಳನ್ನು ಸುರಕ್ಷಿತವಾಗಿಡಲು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಜಿಲ್ಲೆಯಲ್ಲಿ ಗುರುತಿಸಿರುವ ಅಪಘಾತ ವಲಯದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು. ಸರಕು ಸಾಗಣೆ ವಾಹನಗಳಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರನ್ನು ಕೆರದುಕೊಂಡು ಹೋಗುವವರ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಸರ್ಕಾರದ ಸ್ವಾಮ್ಯದ ಅಂಬ್ಯುಲೆನ್ಸ್‍ಗಳಿಗೆ ಆರೋಗ್ಯ ಇಲಾಖೆಯಿಂದ ಈಗಾಗಲೇ ಕಂಟ್ರೋಲ್ ರೂಂ  ಸ್ಥಾಪಿಸಲಾಗಿದ್ದು, ಸದರಿ ಕಂಟ್ರೋಲ್ ರೂಂನಲ್ಲಿ ಖಾಸಗಿ ಅಂಬ್ಯುಲೆನ್ಸ್‍ಗಳ ಮ್ಯಾಪಿಂಗ್ ಮಾಡಲು ಹಾಗೂ ಜಿ.ಪಿ.ಎಸ್ ಉಪಕರಣಗಳನ್ನು ಅಳವಡಿಸುವುದು ಹಾಗೂ ಸಂಚಾರ ನಿಯಮಗಳ ಉಲ್ಲಂಘನೆ ಕುರಿತು ಪೊಲೀಸ್ ಇಲಾಖೆಯಿಂದ ದಾಖಲಾಗಿರುವ ಪ್ರಕರಣಗಳಲ್ಲಿ ಶಿಫಾರಸ್ಸಾಗಿರುವ ಚಾಲನಾ ಅನುಜ್ಞಾ ಪತ್ರಗಳನ್ನು ಅಮಾನತ್ತುಗೊಳಿಸಿ ಹಾಗೂ ಚಾಲನಾ ಅನುಜ್ಞಾ ಪತ್ರಗಳಲ್ಲಿ ಆಧಾರ್ ಸಂಖ್ಯೆಯನ್ನು ನಂಉದಿಸಿ ನಕಲಿ ಚಾಲನಾ ಅನುಜ್ಞಾ ಪತ್ರಗಳನ್ನು ನಿಯಂತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಪೊಲೀಸ್ ವರಿಷ್ಠಾಧಿಕಾರಿ  ಬಿ.ಎಮ್ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

Read These Next

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...