ಪಂಚೆಯುಟ್ಟು ಗದ್ದೆಗಿಳಿದ ಡಿಸಿ. ಪತ್ರಿಕಾ ಸಂಘದ ವಿನೂತನ ಕಾರ್ಯಕ್ರಮ.

Source: SO News | By Laxmi Tanaya | Published on 1st August 2021, 10:59 PM | Coastal News | Don't Miss |

ಕಾರವಾರ : ಬಿಳಿ ಲುಂಗಿ, ಕೇಸರಿ ಅಂಗಿ, ಶಲ್ಯ ಧರಿಸಿ ಪಕ್ಕಾ ಗ್ರಾಮೀಣ ಗೆಟಪ್ನಲ್ಲಿ ಕೆಸರು ಗದ್ದೆಗಿಳಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಇತರ ಅಧಿಕಾರಿಗಳು ಭಾನುವಾರ ಭತ್ತದ ಸಸಿಗಳನ್ನು ನಾಟಿ ಮಾಡಿದರು. 

ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಸಿದ್ದರದಲ್ಲಿ ವಿಭಿನ್ನ ಕಾರ್ಯಕ್ರಮ ಆಯೋಜಿಸಲಾಗಿತ್ತು.

 ಕೆ.ಡಿ.ಪೆಡ್ನೇಕರ್ ಅವರ ಜಮೀನಿನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಡಿಸಿ ಮುಲ್ಲೈ ಮುಗಿಲನ್, ಎಡಿಸಿ ಕೃಷ್ಣಮೂರ್ತಿ ಎಚ್.ಕೆ., ಎಸಿ ವಿದ್ಯಾಶ್ರೀ ಚಂದರಗಿ, ತಹಸೀಲ್ದಾರ್ ನಿಶ್ಚಲ ನರೋನಾ ಭಾಗವಹಿಸಿ, ಕೃಷಿ ಕಾರ್ಯದ ಅನುಭವ ಪಡೆದರು. ಸಸಿಮಡಿಗೆ ಪೂಜೆ ಮಾಡಿ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸಸಿ ನಾಟಿ ಮಾಡಿದರು. .

ಈ ಸಂದರ್ಭದಲ್ಲಿ ಜಮೀನಿನ ಮಾಲೀಕ ಕೆ.ಡಿ.ಪೆಡ್ನೇಕರ್ ಅವರು ನಾಟಿ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲ ಅಧಿಕಾರಿಗಳನ್ನು,ರೋಟರಿ ಅಧ್ಯಕ್ಷ, ನರೇಂದ್ರ ದೇಸಾಯಿ, ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್, ಸೇಂಟ್ ಮಿಲಾಗ್ರಿಸ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಜಾರ್ಜ್  ಫರ್ನಾಂಡಿಸ್ ಅವರನ್ನು ಸನ್ಮಾನಿಸಿದರು.

 ಪತ್ರಿಕಾ ಭವನ ನಿರ್ವಹಣಾ ಸಮಿತಿ ಅಧ್ಯಕ್ಷ ಟಿ.ಬಿ.ಹರಿಕಾಂತ, ಉಪಾಧ್ಯಕ್ಷ ಗಿರೀಶ ನಾಯ್ಕ, ಕಾರ್ಯದರ್ಶಿ ದೀಪಕ್ ಗೋಕರ್ಣ ಇದ್ದರು. ನಂತರ ರೋಟರಿ ಕ್ಲಬ್ನಿಂದ ನೆರೆ ಸಂತ್ರಸ್ತ 5 ಕುಟುಂಬಗಳಿಗೆ ದಿನಸಿ ಕಿಟ್ಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಸ್ತಾಂತರಿಸಿದರು.

Read These Next

ಅಂಕೋಲಾದ ಅನ್ನದಂಗಳದಲ್ಲಿ ಮಾತುಕತೆ ಕಾರ್ಯಕ್ರಮ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ. ಕೃಷಿಕರೊಂದಿಗೆ ಸಂವಾದ

ಕಾರವಾರ : ರೈತರ ಏಳಿಗೆಯ ಜೊತೆ ಕೃಷಿಯಲ್ಲಿ ದೇಶ ಸ್ವಾವಲಂಬಿಯಾಗುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರವು ರೈತ ಸ್ನೇಹಿ ಸರ್ಕಾರವಾಗಿ ...

ಶಾಲಾ ಕಾಲೇಜುಗಳಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲನೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಪರಿಶೀಲನೆ.

ಉಡುಪಿ : ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಪಾಲನೆ ಮಾಡುತ್ತಿರುವ ...

ಭಾರತ ವಿಶ್ವಕ್ಕೆ ಸಿರಿ ಧಾನ್ಯ ರಫ್ತು ಮಾಡುವ ಹಬ್ ಆಗಲಿದೆ - ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ : ಮುಂದಿನ ಎರಡು ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ...

ಅಂಕೋಲಾದ ಅನ್ನದಂಗಳದಲ್ಲಿ ಮಾತುಕತೆ ಕಾರ್ಯಕ್ರಮ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ. ಕೃಷಿಕರೊಂದಿಗೆ ಸಂವಾದ

ಕಾರವಾರ : ರೈತರ ಏಳಿಗೆಯ ಜೊತೆ ಕೃಷಿಯಲ್ಲಿ ದೇಶ ಸ್ವಾವಲಂಬಿಯಾಗುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರವು ರೈತ ಸ್ನೇಹಿ ಸರ್ಕಾರವಾಗಿ ...