ಕೋಲಾರ: ಡಿಸಿಸಿ ಬ್ಯಾಂಕ್ ಮೊಬೈಲ್ ಬ್ಯಾಂಕಿಂಗ್ ಸೇವೆಯ ಅನಾವರಣ, ಸಮಾಜದ ಕಟ್ಟಕಡೆ ವ್ಯಕ್ತಿಗೂ ಸೇವೆ; ಬ್ಯಾಲಹಳ್ಳಿ ಗೋವಿಂದಗೌಡ

Source: Shabbir Ahmed | By S O News | Published on 23rd June 2021, 7:03 PM | State News |

ಕೋಲಾರ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿಂಗ್ ಸೇವೆ ತಲುಪಿಸುವ ಸಂಕಲ್ಪದೊಂದಿಗೆ ಡಿಜಟಲೀಕರಣದ ಮೂಲಕ ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮುನ್ನುಡಿ ಬರೆದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

ಬುಧವಾರ ಬ್ಯಾಂಕಿನ ಸಭಾಂಗಣದಲ್ಲಿ ಭಾರತೀಯ ರಿಸರ್ವ್ ಬ್ಯಾಂಕಿನಿಂದ ಮಂಜೂರಾಗಿರುವ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿ, ವಾಣಿಜ್ಯ ಬ್ಯಾಂಕುಗಳಿಗಿಂತ ಅತ್ಯುತ್ತಮ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುವ ಧ್ಯೇಯ ನಮ್ಮದಾಗಿದ್ದು, ಗ್ರಾಹಕರು ಠೇವಣಿ ಇಡುವ ಮೂಲಕ ಬ್ಯಾಂಕಿಗೆ ಶಕ್ತಿ ತುಂಬಬೇಕು ಎಂದರು.

ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ನಾಗನಾಳ ಸೋಮಣ್ಣ, ಅನಿಲ್ ಕುಮಾರ್, ಹನುಮಂತರೆಡ್ಡಿ, ಕೆ.ವಿ.ದಯಾನಂದ್, ವೆಂಕಟರೆಡ್ಡಿ, ನಾಗಿರೆಡ್ಡಿ, ಗೋವಿಂದರಾಜ್, ವೃತ್ತಿಪರ ನಿರ್ದೇಶಕ ಮಹಮದ್ ಇಲಿಯಾಸ್, ಬ್ಯಾಂಕಿನ ಎಂಡಿ ವೆಂಕಟೇಶಪ್ಪ, ಮುಖಂಡ ಎಸ್.ವಿ.ಸುಧಾಕರ್, ಸಿಬ್ಬಂದಿ ಪದ್ಮಮ್ಮ ಹ್ಯಾರೀಸ್, ಜಬ್ಬಾರ್ ಮತ್ತಿತರರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...