ಹೃದಯಾಘಾತದಿಂದ ಕರ್ತವ್ಯನಿರತ ಪೇದೆ ಠಾಣೆಯಲ್ಲೇ ಸಾವು

Source: so news | By Manju Naik | Published on 19th April 2019, 11:55 PM | State News | Don't Miss |


 
ಚಿಕ್ಕಮಗಳೂರು: ರಾತ್ರಿಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರು ಠಾಣೆಯಲ್ಲಿ ನಡೆದಿದೆ.
ಯೋಗೀಶ್ (32) ಮೃತಪಟ್ಟ ಪೇದೆ. ಗುರುವಾರ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಯೋಗೀಶ್ ಠಾಣೆಯಲ್ಲಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಇತರೇ ಸಿಬ್ಬಂದಿ ತಕ್ಷಣ ಯೋಗೀಶ್‍ನನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯೋಗೀಶ್ ಸಾವನ್ನಪ್ಪಿದ್ದಾರೆ.
ಇದು ಆತ್ಮಹತ್ಯೆಯೋ ಅಥವಾ ಸಹಜ ಸಾವೋ ಎನ್ನುವುದು ಮರಣೋತ್ತರ ವರದಿ ಬಂದ ಬಳಿಕ ಸ್ಪಷ್ಟವಾಗಲಿದೆ. ಆದರೆ ಸದ್ಯಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಹೇಳಲಾಗ್ತಿದೆ. ಮೃತ ಯೋಗೀಶ್ ಮೂಲತಃ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಮೈಲಿಮನೆ ನಿವಾಸಿಯಾಗಿದ್ದು, 2009ರಲ್ಲಿ ಪೊಲೀಸ್ ಇಲಾಖೆ ಸೇರಿದ್ದರು. ಈ ಬಗ್ಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read These Next