ಕುವೈತ್ ನ ದೊರೆ ಶೇಖ್ ಸಬಾಹ್ ನಿಧನ

Source: sonews | By Staff Correspondent | Published on 29th September 2020, 10:43 PM | National News | Gulf News |

ಹೊಸದಿಲ್ಲಿ: ಕುವೈತ್ ನ ಅಮೀರ್ ಸಬಾಹ್ ಅಲ್ ಅಹ್ಮದ್ ಅಲ್ ಜಾಬಿರ್ ಅಲ್ ಸಬಾಹ್ (91) ಅಮೆರಿಕದ ಆಸ್ಪತ್ರೆಯೊಂದರಲ್ಲಿ ಮಂಗಳವಾರ ನಿಧನರಾಗಿದ್ದಾರೆ.

1929ರಲ್ಲಿ ಜನಿಸಿದ ಸಬಾಹ್  ಅಲ್ ಅಹ್ಮದ್ ಅವರು ಆಧುನಿಕ ಕುವೈತ್ ನ ವಿದೇಶಾಂಗ ನೀತಿಯ ವಾಸ್ತುಶಿಲ್ಪಿ ಎಂದೇ ಪ್ರಸಿದ್ಧರಾದವರು. 1963ರಿಂದ 2003ರವರೆಗೆ ಸುಮಾರು 40 ವರ್ಷಗಳ ಕಾಲ ಅವರು ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಶೇಖ್ ಜಾಬಿರ್ ಅಲ್ ಸಬಾಹ್ ಅವರ ನಿಧನದ ನಂತರ 2006ರ ಜನವರಿಯಲ್ಲಿ ಅವರು ಕುವೈತ್ ನ ಅಮೀರ್ ಆದರು.

Read These Next

ಪಂಜಾಬ್‌ಗೆ ಮೊದಲ ದಲಿತ ಮುಖ್ಯಮಂತ್ರಿ; ಚರಣ್‌ಜೀತ್ ಸಿಂಗ್ ಚನ್ನಿಗೆ ಸಿಎಂ ಪಟ್ಟ, ಇಂದು ಪ್ರಮಾಣ

ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಹೈಕಮಾಂಡ್, ದಲಿತ ಸಿಖ್ ಸಮುದಾಯದ ...

ಪಾರ್ಶ್ವವಾಯು ಪೀಡಿತರಾಗಿದ್ದ ರಿಯಾದ್ ಉದ್ಯೋಗಿ ವಿಮಾನದ ಮೂಲಕ ತಾಯ್ನಾಡಿಗೆ. ಮಾನವೀಯತೆ ಮೆರೆದ ವೈದ್ಯರ ಮತ್ತು ಸಮಾಜಸೇವಕ ಬಳಗ.

ಮಂಗಳೂರು : ಕಳೆದ ಮೂರುವರೆ ತಿಂಗಳಿಂದ ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದ ಕುಂದಾಪುರ ಮೂಲದ ವ್ಯಕ್ತಿಯೊಬ್ಬರನ್ನ ...