ಅರಣ್ಯ ಇಲಾಖೆ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಪರಿಹಾರ ಹೊತ್ತ 30 ಲಕ್ಷ ರೂ.ಗೆ ಏರಿಕೆ: ಆನಂದ್ ಸಿಂಗ್

Source: uni | Published on 12th September 2020, 12:47 AM | State News | Don't Miss |

ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಕ್ಲಿಷ್ಟಕರ ಸನ್ನೆವೇಶಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಮರಣ ಹೊಂದಿದಲ್ಲಿ ಅವರಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ರಾಜ್ಯ ಸರ್ಕಾರ 20 ರಿಂದ 30 ಲಕ್ಷ ರೂ. ಗಳಿಗೆ ಏರಿಕೆ ಮಾಡಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ.
ಅಲ್ಲದೆ ಹುತಾತ್ಮರ ಕುಟುಂಬಗಳಿಗೆ ನೆರವಾಗಲು ಹುತಾತ್ಮರ ದಿನಾಚರಣೆ ಸಮಿತಿಯನ್ನು ರಚಿಸಿ ನಿಧಿ ಸಂಗ್ರಹಿಸಲಾಗಿದ್ದು, ಈವರೆಗೆ ಕ್ರೋಢೀಕರಣವಾಗಿರುವ ಒಟ್ಟು 20,64,842 ರೂ. ಮೊತ್ತವನ್ನು ಹುತಾತ್ಮರ ಅವಲಂಬಿತರ ಏಳಿಗೆಗಾಗಿ ಬಳಸಲಾಗುವುದು ಎಂದರು.
ಅರಣ್ಯ ಭವನದಲ್ಲಿಂದು ಏರ್ಪಡಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-೨೦೨೦ ಹಾಗೂ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ಅವರು, ಅರಣ್ಯ ಉಳಿಸಿ ಬೆಳೆಸುವುದು, ಅರಣ್ಯ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಅರಣ್ಯ ಸಂರಕ್ಷಣೆ ರಾಷ್ಟ್ರದ ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದರು.
ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಮೂರು ಅಂಗಗಳು ಒಟ್ಟಾಗಿ ಕೆಲಸ ನಿರ್ವಹಿಸಿದಲ್ಲಿ ಸಾಮಾಜಿಕ ನ್ಯಾಯ ದೊರಕಿಸಲು ಸಾಧ್ಯ. ಆಗ ಮಾತ್ರ ಸಾಮಾನ್ಯ ಜನರಿಗೆ ನ್ಯಾಯ ದೊರಕುತ್ತದೆ ಎಂದು ಸಚಿವರು ಹೇಳಿದರು

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...