ಶರಾವತಿ ಅಭಯಾರಣ್ಯಕ್ಕೆ ಅರಣ್ಯ ಪ್ರದೇಶ ಸೇರ್ಪಡೆ ವಿರೋಧಿಸಿ ಅ.೧೦ ರಂದು ಬೃಹತ್ ಪ್ರತಿಭಟನೆಗೆ ನಿರ್ಧಾರ

Source: sonews | By Staff Correspondent | Published on 18th September 2019, 4:58 PM | Coastal News | Don't Miss |

ಭಟ್ಕಳ: ಶರಾವತಿ ಅಭಯಾರಣ್ಯಕ್ಕೆ ಭಟ್ಕಳ ತಾಲೂಕಿನ ಅರಣ್ಯ ಪ್ರದೇಶವನ್ನು ಸೇರ್ಪಡಿಸಿದ್ದನ್ನು ಖಂಡಿಸಿ ಹಾಗೂ ಸೇರ್ಪಡೆಗೊಂಡ ಪ್ರದೇಶವನ್ನು ಕೈ ಬಿಡಬೇಕೆಂದು ಆಗ್ರಹಿಸಿ ಅಕ್ಟೋಬರ್ 10 ಗುರುವಾರ ಮುಂಜಾನೆ 10.00 ಗಂಟೆಗೆ ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸೆ. 17 ರಂದು ಸ್ಥಳಿಯ ಸತ್ಕಾರ ಹೊಟೇಲ್‍ನ ಸಭಾಂಗಣದಲ್ಲಿ ಜರುಗಿದ ತಾಲೂಕಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಸಭೆಯಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಎ.ರವೀಂದ್ರ ನಾಯ್ಕ ಅಧ್ಯಕ್ಷತೆಯಲ್ಲಿ ಹಾಗೂ ವೇದಿಕೆ ತಾಲೂಕಾಧ್ಯಕ್ಷ ರಾಮಾ ಮೊಗೇರ ಉಪಸ್ಥಿತಿಯಲ್ಲಿ ಮೇಲಿನಂತೆ ತೀರ್ಮಾನಿಸಲಾಗಿದೆ.

ಶರಾವತಿ ಅಭಯಾರಣ್ಯಕ್ಕೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ವಲಯ ಅರಣ್ಯ ವ್ಯಾಪ್ತಿಯ ಕೊಪ್ಪ, ಹೆಂಜಾಲಿ, ಅಗ್ಗ, ಬಡಾಬಾಗ, ಹೆಸರವಲ್ಲಿ, ಹಲ್ಯಾಣಿ, ಕೆಕ್ಕೋಡ, ಹಾಡುವಳ್ಳಿ, ಮುರ್ಕೋಡಿ, ಓಣಿಬಾಗ, ಕುರುಂದುರು, ಕುಳವಾಡಿ, ಅರವಕ್ಕಿ, ಹೆಜ್ಜೆ ಮುಂತಾದ ಗ್ರಾಮಗಳನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಜನಾಭಿಪ್ರಾಯ ಮೂಡಿಸುವ ಹಾಗೂ ಅಭಯಾರಣ್ಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುವ ಹಿನ್ನೆಲೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾವುದೆಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಶರಾವತಿ ಅಭಿಯಾನಕ್ಕೆ ಉ.ಕ. ಜಿಲ್ಲೆಯ ಅಘನಾಶಿನಿ ಶಿಂಗಳಿಕ ಸಂರಕ್ಷಿತ 30,000 ಹೆಕ್ಟೇರ್ ಪ್ರದೇಶವನ್ನು ಸರ್ಕಾರ ಏಕಾ ಏಕಿಯಾಗಿ ಪ್ರಸಕ್ತ ವರ್ಷ ಜೂನ ತಿಂಗಳಲ್ಲಿ ಸೇರ್ಪಡೆ ಮಾಡಿ ಅಂತಿಮ ಆದೇಶ ಮಾಡಿರುವುದು ಜನ ವಿರೋಧಿ ನೀತಿಯಾಗಿದ್ದು, ಯೋಜನೆಗೆ ಜನಾಭಿಪ್ರಾಯ ಸಂಗ್ರಹಿಸದೇ ಅಂತಿಮ ಆದೇಶ ಕಾನೂನು ಬಾಹೀರ ಎಂಬುದನ್ನು ಸಭೆಯಲ್ಲಿ ಚರ್ಚಿಸಲಾಯಿತು. ಸಮಗ್ರ ಯೋಜನೆಯನ್ನು ವಿರೋಧಿಸುವಲ್ಲಿ ಬೃಹತ್ ಪ್ರತಿಭಟನೆಗೆ ಕಾರ್ಯಯೋಜನೆ ಕುರಿತು ಸಭೆಯಲ್ಲಿ ನಿಯೋಜಿಸಲಾಯಿತು.
  
ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ಪ್ರಾಸ್ತಾವಿಕ ಜಿಲ್ಲಾ ಸಂಚಾಲಕ ದೇವರಾಜ ಗೊಂಡ ಮಾಡಿದರೇ, ಪಾಂಡುರಂಗ ನಾಯ್ಕ ವಂದಿಸಿದರು. ಕುಮಟಾ ತಾಲೂಕಾಧ್ಯಕ್ಷ ಮಂಜುನಾಥ ಮರಾಠಿ, ಶಬ್ಬೀರ, ಶಿವು ಮರಾಠಿ, ಪುಟ್ಟಾ ಮರಾಠಿ, ಈಶ್ವರ ಗೊಂಡ, ರಿಜ್ವಾನ್, ಖಯ್ಯೂಮ್, ಸುಲೇಮಾನ ಸಾಬ, ಈರಪ್ಪಾ ನಾಯ್ಕ, ಮಂಜುನಾಥ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...