ಈ ಬಾರಿ ಅರ್ಥಪೂರ್ಣ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಿರ್ಧಾರ: ಡಾ. ಕೆ.ಸಿ ನಾರಾಯಣಗೌಡ

Source: SO News | By Laxmi Tanaya | Published on 20th September 2021, 8:45 PM | State News | Don't Miss |

ಮಂಡ್ಯ : ಅಕ್ಟೋಬರ್ 9, 10 ಮತ್ತು 11 ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣ ದಸರಾ ಆಚರಣೆಗೆ ಕ್ರಮವಹಿಸಿ ಎಂದು ರೇಷ್ಮೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದರು.

ಬೆಂಗಳೂರಿನ ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಸರಾ ಮಹೋತ್ಸವ 2021ರ ಆಚರಣೆ ಸಂಬಂಧ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ಟೊಬರ್ 09 ರಂದು ಜಂಬೂಸವಾರಿ ನಡೆಯಲಿದ್ದು, ಅಂಬಾರಿ ಆನೆತರಲು ಅರಣ್ಯ ಇಲಾಖೆ, ಪಶುಸಂಗೋಪನ ಇಲಾಖೆಯೊಂದಿಗೆ ಮಾತನಾಡಿ ಕ್ರಮವಹಿಸಲಾಗುವುದು  ಎಂದರು.

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆವತಿಯಿಂದ  ಫಿಟ್ ಇಂಡಿಯಾ, ಕಬ್ಬಡ್ಡಿ, ಕುಸ್ತಿ ಸ್ಪರ್ಧೆಗಳನ್ನು ಆಯೋಜಿಸಿ ಎಂದರು.

ಮಂಡ್ಯ ಜಿಲ್ಲೆಯ ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲಾತಂಡಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಹಾಗೂ ಕವಿಗೋಷ್ಟಿಗಳ ಮೂಲಕ ಸಾಂಸ್ಕೃತಿಕ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಹೇಳಿದರು.

ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಹಾಗೂ ಕರೋನಾ ಕಠಿಣ ಸಂದರ್ಭದಲ್ಲಿ ಸೇವೆ ನೀಡಿದವರನ್ನು ಗುರುತಿಸಿ ಸನ್ಮಾನಿಸಿ.
ಪಾಂಡವಪುರದ ಕೆರೆತೊಣ್ಣುರು, ಕೆ,ಆರ್ ಎಸ್ ನ ಹಿನ್ನೀರಿನಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಿ ಹಾಗೂ ಜಲಕ್ರೀಡೆಗಳನ್ನು ಆಯೋಜಿಸಿ ಎಂದರು.

ದಸರಾ ಕಾರ್ಯಕ್ರಮ ಯಶಸ್ವಿಯಾಗುವ ನಿಟ್ಟಿನಲ್ಲಿ ವೇದಿಕೆ ನಿರ್ಮಾಣ, ವಿದ್ಯುತ್ ಸಂಪರ್ಕ ವ್ಯವಸ್ಥೆ, ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸೋ ಜೊತೆಗೆ ದಸರಾ ಪ್ರಯುಕ್ತ ಪ್ರವಾಸಿ ತಾಣಗಳ ಶುಚಿತ್ವ, ಬನ್ನಿಮಂಟಪ ಜಂಬೂಸವಾರಿ ಹೊರಡುವ ರಾಜಬೀದಿಗಳ ಶುಚಿತ್ವ ಬಗ್ಗೆ ಕ್ರಮವಹಿಸಬೇಕು. ಜಿಲ್ಲೆಯ ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನವನ್ನು ಏರ್ಪಡಿಸಿ, ಜನರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ ಆರೋಗ್ಯ ತಪಾಸಣಾ ಶಿಬಿರ, ಆರೋಗ್ಯದ ಜಾಗೃತಿ ಮೂಡಿಸುವ ವಸ್ತುಪ್ರದರ್ಶನ ಹಾಗೂ ಕೋವಿಡ್ 3 ನೇ ಅಲೆಯ ಬಗ್ಗೆ , ಮಾಸ್ಕ್ ಧರಿಸುವಿಕೆ, ಸ್ಯಾನಿಟೈಜರ್ , ಸಾಮಾಜಿಕ ಅಂತರದ ಬಗ್ಗೆ ಜಾಗೃತಿ ಮೂಡಿಸಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್ ಅಶ್ವತಿ, ಜಿ.ಪಂ ಸಿಇಒ ದಿವ್ಯಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ, ಶಾಶ್ವತಿ ಧಾರ್ಮಿಕ ಕ್ರಿಯಾ ಸಮಿತಿಯ ಸಂಸ್ಥಾಪಕರಾದ ಡಾ.ಭಾನುಪ್ರಕಾಶ್ , ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್,  ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಶ್ರೀರಂಗಪಟ್ಟಣ ತಹಶೀಲ್ದಾರರಾದ ಶ್ವೇತಾ, ವಾರ್ತಾಧಿಕಾರಿ ಟಿ.ಕೆ ಹರೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...