ಕೃಷಿ ವಿಶ್ವವಿದ್ಯಾಲಯಗಳ ಶಿಕ್ಷಕ ಹಾಗೂ ಶಿಕ್ಷಕೇತರ, ಗುತ್ತಿಗೆ ಸಿಬ್ಬಂದಿಗೆ ರಜೆ ಘೋಷಣೆ:  ಬಿ.ಸಿ.ಪಾಟೀಲ್

Source: sonews | By Staff Correspondent | Published on 23rd March 2020, 6:44 PM | State News |

ಬೆಂಗಳೂರು: ರಾಜ್ಯದ ಬೆಂಗಳೂರು,ಧಾರವಾಡ, ರಾಯಚೂರು ಹಾಗೂ ಶಿವಮೊಗ್ಗದಲ್ಲಿರುವ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ಗುತ್ತಿಗೆ ಆಧಾರಿತ ಸಿಬ್ಬಂದಿಗಳಿಗೆ ಮಾ 23 ರಿಂದ ಮಾ31ರವರೆಗೆ ರಜೆ ನೀಡುವಂತೆ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ  ಇಲಾಖೆಯು ಮಾ21ರಂದು ಹೊರಡಿಸಿರುವ ಪತ್ರದನ್ವಯ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವೇತನ ಸಹಿತ ರಜೆ ನೀಡಲು ಸಚಿವರು ಸೂಚಿಸಿದ್ದಾರೆ.

ಮಾ 14 ರಿಂದ 31ರವರೆಗೆ ವಿದ್ಯಾರ್ಥಿಗಳಿಗೆ ಈಗಾಗಲೇ ರಜೆಯನ್ನು ಘೋಷಿಸಲಾಗಿದೆ.
ರಜಾ ಸಮಯದಲ್ಲಿ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಶೋಧನೆಗೆ ಸಂಬಂಧಿಸಿದ ಸಂಶೋಧನ ಅಧ್ಯಯನ ಪಠ್ಯಕ್ರಮವನ್ನು ಆನ್ಲೈನ್ ಮೂಲಕ ಅಭಿವೃದ್ಧಿ ಪಡಿಸುವಂತೆ ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಪ್ರಶ್ನೆ ಬ್ಯಾಂಕ್ ತಯಾರಿಸಲು ಮತ್ತು ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ತಂಗಲು ಸುರಕ್ಷಿತ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.

ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಮುಂಜಾಗ್ರತಾ ಕ್ರಮವಾಗಿ ದಿನಾಂಕ:27-03-2020 ರಿಂದ 09-04-2020 ರವರೆಗೆ ನಡೆಯುವ ಕರ್ನಾಟಕ ಮುಕ್ತ ಶಾಲೆ ಕೆ.ಓ.ಎಸ್ ಪರೀಕ್ಷೆಯು ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
 

Read These Next

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣ ಕುರಿತು ಚರ್ಚೆ

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣ ಕುರಿತು ಚರ್ಚೆ

ಕೋವಿಡ್ ನಿಯಂತ್ರಣ ಕಾರ್ಯ ನಿರ್ಲಕ್ಷಿಸುವ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಕೋವಿಡ್ ನಿಯಂತ್ರಣ ಕಾರ್ಯ ನಿರ್ಲಕ್ಷಿಸುವ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ