ನಗರದ ವಿವಿಧೆಡೆ ಜಿಲ್ಲಾಧಿಕಾರಿಗಳಿಂದ ದೀಡೀರ್ ಭೇಟಿ : ಸ್ಥಳ ಪರಿಶೀಲನೆ

Source: so news | By MV Bhatkal | Published on 9th March 2019, 11:08 PM | State News | Don't Miss |

ಹಾಸನ:ಶನಿವಾರ ಬೆಳಗ್ಗೆಯಿಂದಲೇ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ನಗರದ ವಿವಿದೆಡೆಗೆ ಧೀಡಿರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ನಗರದ ಜಿಲ್ಲಾ ಆಸ್ಪತ್ರೆ ಎದುರಿರುವ ಇಂದಿರಾ ಕ್ಯಾಂಟನ್‍ಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಧೀಡಿರ್ ಭೇಟಿ ನೀಡಿ ಕ್ಯಾಂಟೀನ್ ವ್ಯವಸ್ಥೆ, ಆಹಾರ ಪೂರೈಕೆ , ಸ್ವಚ್ಚತೆ ಹಾಗೂ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು. 
ಬೆಳಗಿನ ಉಪಹಾರವಾದ ಇಡ್ಲಿ ಮತ್ತು ಪಲಾವ್‍ನ್ನು ಸವಿದು, ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿ ಅವರು ಸಾರ್ವಜನಿಕರಿಂದ ಅಭಿಪ್ರಾಯ ಪಡೆದುಕೊಂಡು ಯಾವುದೇ ಲೋಪ ಇದ್ದಲ್ಲಿ ತಿಳಿಸುವಂತೆ ಹೇಳಿದರು.
ಇಂದಿರಾ ಕ್ಯಾಂಟಿನ್‍ನಲ್ಲಿನ ಸಿಬ್ಬಂದಿಗಳಿಗೆ ಸ್ವಚ್ಚತೆಯನ್ನು ಕಾಪಾಡುವಂತೆ, ಆಹಾರವನ್ನು ರುಚಿ ಮತ್ತು ಶುಚಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವಿತರಿಸಲು ಸೂಚಿಸಿದರು. ಅಲ್ಲದೇ ಆರೋಗ್ಯ ನಿರೀಕ್ಷಕರಿಗೆ ಆಗಿಂದಾಗ್ಗೆ ಕ್ಯಾಂಟೀನ್‍ಗೆ ಬೇಟಿ ನೀಡಿ ಸ್ವಚ್ಚತೆ ಪರಿಶೀಲಿಸುವಂತೆ ನಿರ್ದೇಶಿಸಿದರು. 
ಇದೇ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೆ.ಶಂಕರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಕೃಷ್ಣ ಮೂರ್ತಿ, ತಹಸೀಲ್ದಾರ್ ಶ್ರೀನಿವಾಸಯ್ಯ ಮತ್ತಿತರರು ಹಾಜರಿದ್ದರು.
ಹಣ್ಣಿನ ಮಾರುಕಟ್ಟೆ ಭೇಟಿ: ನಗರ ವ್ಯಾಪ್ತಿಯಲ್ಲಿ ಬರುವಂತಹ ಹಣ್ಣಿನ ಮತ್ತು ಹೂವಿನ ಮಾರುಕಟ್ಟೆಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಅಭಿವೃದ್ದಿ ಪಡಿಸಲಾಗುತ್ತಿದ್ದ ರಸ್ತೆ ಮತ್ತು ಚರಂಡಿಯ ಕಾಮಗಾರಿಯ ಗುಣಮಟ್ಟವನ್ನು ಪರೀಕ್ಷಿಸಿದರು. 
ಮಾರುಕಟ್ಟೆಯ ಸುತ್ತಾ ಮುತ್ತಾ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆಯನ್ನು ಪರಿಶೀಲಿಸಿದರು ಈ ಸಂದರ್ಭ ಜಿಲ್ಲಾಧಿಕಾರಿ ಅವರು ನಗರಸಭೆಯ ತ್ಯಾಜ್ಯ ನಿರ್ವಹಣೆ ಪ್ರದೇಶಕ್ಕೂ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಮಾರುಕಟ್ಟೆಯಲ್ಲಿನ ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು. 
ಈ ಸಂದರ್ಭದಲ್ಲಿ ನಗರಸಭೆಯ ಕಿರಿಯ ಅಭಿಯಂತರರಾದ ಪ್ರವೀಣ್ ಮಾಹಿತಿ ನೀಡಿ, ಸದರಿ ಕಾಮಗಾರಿಯು ಐ.ಡಿ.ಎಸ್.ಎಂ.ಟಿ. ಯೋಜನೆಯಡಿಯಲ್ಲಿ ಮಂಜೂರಾತಿ ಪಡೆದಿದ್ದು, ಸುಮಾರು 102 ಮಳಿಗೆಗಳಿಗೆ ರಸ್ತೆ, ಚರಂಡಿಯನ್ನು ಅಭಿವೃದ್ದಿಪಡಿಸುತ್ತಿರುವುದಾಗಿ ವಿವರಿಸಿದರು. 
ಕಾಮಗಾರಿಯಲ್ಲಿ ಗುಣಮಟ್ಟಣವನ್ನು ಕಾಯ್ದುಕೊಂಡು ಹಾಗೂ ಯಾವುದೇ ಲೋಪವಾಗದಂತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು. ಸೂಚಿಸಿದರಲ್ಲದೆ 
ಅಗಿಲೆಯಲ್ಲಿರುವ ನೆಲಭರ್ತಿ ಜಾಗವನ್ನು ಪರಿಶೀಲಿಸಿ ಮತ್ತು ಕೂಡಲೇ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿಮಾಡಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...