ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ

Source: sonews | By Staff Correspondent | Published on 23rd August 2019, 6:54 PM | State News |

ಶ್ರೀನಿವಾಸಪುರ: ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಬಹಳ ಮುಖ್ಯ ಎಂದು ತಾಲ್ಲೂಕು ದಂಡಾಧಿಕಾರಿ ಬಿ.ಎಸ್.ರಾಜೀವ್ ತಿಳಿಸಿದರು.

ತಾಲ್ಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಏಪರ್ಡಿಸಿದ್ದ ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ ವಿದ್ಯಾರ್ಥಿ ನಿಲಯಗಳ ತಾಲ್ಲೂಕು ಮಟ್ಟದ ಕ್ರೀಡಾ ಕೂಟವನ್ನು ಉದ್ಗಾಟಿಸಿ ಮಾತನಾಡಿದ ರಾಜೀವ್ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ನಾಯಕತ್ವ ಗುಣ ರೂಪುಗೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ರೀಡೆಗಿಂತ ತಂತ್ರಜ್ಞಾನದೊಂದಿಗೆ ಹೆಚ್ಚು ತೊಡಗಿಸಿಕೊಂಡಿದ್ದಾರೆ ಮೊಬೈಲ್, ಕಂಪ್ಯೂಟರ್ ಮೂಲಕ ವಿವಿಧ ರೀತಿಯ ಆಟಗಳನ್ನು ಆಡುತ್ತಿದ್ದಾರೆ ಆದರೆ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಇದು ಪೂರಕವಾಗಲ್ಲ ಇದನ್ನು ಮೊದಲು ವಿದ್ಯಾರ್ಥಿಗಳು ಬಿಡಬೇಕು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರೀಡೆಗಳಲ್ಲಿ ಹೆಚ್ಚು ಭಾಗವಹಿಸಬೇಕು ಜೀವನದಲ್ಲಿ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಮಹತ್ವವಿದೆ ವಿದ್ಯಾರ್ಥಿ ದಸೆಯಲ್ಲಿಯೇ ಕ್ರೀಡಾಕೂಟವನ್ನು ಬೆಳೆಸಿಕೊಳ್ಳುವುದರಿಂದ ದೇಹದ ಆರೋಗ್ಯ ಮಾನಸಿಕ ಮತ್ತು ಭೌತಿಕ ಸ್ಥಿಮಿತ ಕಾಪಾಡಿಕೊಳ್ಳಬಹುದು ಜಾಗತಿಕ ಮಟ್ಟದಲ್ಲಿ ಕ್ರೀಡೆಗಳಿಗೆ ಮಹತ್ವವಾದ ಅವಕಾಶಗಳಿದ್ದು ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಗೆ ಕ್ರೀಡೆಗಳಲ್ಲಿ ಸಹಾ ಹೆಚ್ಚಿನ ಮಹತ್ವ ಕೊಡಬೇಕೆಂದರು. 

ನಮ್ಮ ರಾಜ್ಯದಲ್ಲಿ ನಮ್ಮ ಶ್ರೀನಿವಾಸಪುರ ತಾಲ್ಲೂಕು ಫಲಿತಾಂಶದಲ್ಲಿ 2 ನೇ ಸ್ಥಾನದಲ್ಲಿದೆ ತುಂಬಾ ಸಂತೋಷವಾಗಿದೆ ಮುಂದಿನ ಫಲಿತಾಂಶದಲ್ಲಿ ಜಿಲ್ಲೆಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆಯ ಹಾಸ್ಪಲ್‍ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಫಲಿತಾಂಶ 1 ನೇ ಸ್ಥಾನದಲ್ಲಿರಬೇಕು ವಸತಿ ಶಾಲೆಯ ಮಕ್ಕಳು ಯಾವುದೇ ಶಾಲೆಗಳಿಗಿಂತ ಕಡಿಮೆ ಇರಬಾರದು ವಸತಿ ಶಾಲೆಯಲ್ಲಿ ಓದಿರುವಂತಹ ವಿದ್ಯಾರ್ಥಿಗಳು ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ ಅವರಂತೆ ನೀವು ಸಹ ಬರಬೇಕು ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಕನಸು ನನಸಾಗಬೇಕು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ತಾಲ್ಲೂಕಿಗೆ ನಿಮ್ಮ ಪೋಷಕರಿಗೆ ಈ ಇಲಾಖೆಗೆ ಒಳ್ಳೆಯ ಹೆಸರನ್ನು ತರಬೇಕೆಂದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಎನ್.ರಾಜಣ್ಣ ರವರು ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣ ಜೊತೆಗೆ ಉತ್ತಮ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ತುಂಬಾ ಅವಶ್ಯಕವಾಗಿವೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಪೂರಕವಾಗಿವೆ. ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯವಾಗಿರುತ್ತವೆ ಎಲ್ಲಾ ಕ್ರೀಡಾ ಪಟುಗಳು ಸ್ಪೂರ್ತಿಯಿಂದ ಆಟಗಳನ್ನು ಆಡಬೇಕು ಉತ್ತಮ ರೀತಿಯಲ್ಲಿ 2 ದಿನಗಳ ಕಾಲ ಕ್ರೀಡಾ ಪಟುಗಳು ಉತ್ಸಾಹದಿಂದ ಭಾಗವಹಿಸಿ ಉತ್ತಮ ರೀತಿಯಲ್ಲಿ ಪ್ರದರ್ಶನವನ್ನು ಮಾಡಬೇಕು ಎಂದರು.

ಪ್ರಥಮ ಭಾರಿಗೆ ವಸತಿ ನಿಲಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಕ್ರೀಡಾಕೂಟ ಮಾಡುತ್ತಿರುವುದು ತುಂಬಾ ಸಂತೋಷವಾಗಿದೆ ಡಾ.ಬಾಬಾಸೇಹೇಬ್ ಅಂಬೇಡ್ಕರ್ ರವರು ಕಂಡಂತಹ ಕನಸು ವಿದ್ಯಾರ್ಥಿಗಳು ನನಸಾಗಿಸಬೇಕು, ದೇಶಕ್ಕೆ ಸಂವಿಧಾನವನ್ನು ಕೊಟ್ಟಂತಹ ಕೀರ್ತಿ ಇವರಿಗೆ ಸಲ್ಲುತ್ತದೆ. ವಿದ್ಯಾರ್ಥಿಗಳು ಶಿಸ್ತು ಮತ್ತು ಸಂಯಮದಿಂದ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿಕೊಳ್ಳಲು ಒಂದು ಉತ್ತಮವಾದ ಕ್ರೀಡಾಕೂಟವಾಗಿದೆ ಎಂದರು.
ಯಾವುದೇ ಕಾರ್ಯಕ್ರಮ ಮಾಡಲಿ ನಮ್ಮ ತಾಲ್ಲೂಕು ದಂಡಾಧಿಕಾರಿಗಳು ನಮಗೆ ತುಂಬಾ ಸಹಕಾರ ಮಾಡುತ್ತಿದ್ದು, ಎಷ್ಟೇ ಕಾರ್ಯಕ್ರಮಗಳಿದ್ದರೂ ಈ ಒಂದು ಕ್ರೀಡಾ ಕೂಟಾ ಕಾರ್ಯಕ್ರಮಕ್ಕೆ ಬಂದು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ ಇವರಿಗೆ ಸಮಾಜ ಕಲ್ಯಾಣ ಇಲಾಖೆ ಪರವಾಗಿ ಹೃದಯಪೂರ್ವಕ ಕೃತಜ್ಞತೆಗಳನ್ನು ಈ ಸಂದರ್ಭದಲ್ಲಿ ಸಲ್ಲಿಸುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರಾದ ಆರ್.ವಿ.ಚಂದ್ರು, ಹಿಂದಿ ಶಿಕ್ಷಕರಾದ ನಾಗರಾಜ್, ವಿದ್ಯಾರ್ಥಿನಿಲಯದ ಮೇಲ್ವಿಚಾರಕರಾದ ಶ್ರೀನಿವಾಸ್, ಗಣೇಶ್, ಲಕ್ಷ್ಮೀ, ಬೈರೇಗೌಡ, ನರಸಿಂಹಯ್ಯ, ಕೆ.ಕೆ.ವೆಂಕಟರಮಣ, ಏಕಲವ್ಯ ವಸತಿ ಶಾಲೆಯ ಪ್ರಾಂಶುಪಾಲರಾದ ರಘು, ದಳಸನೂರು ಶಾಲೆಯ ಮುಖ್ಯಶಿಕ್ಷಕರಾದ ನಾರಾಯಣಸ್ವಾಮಿ, ದೈಹಿಕ ಶಿಕ್ಷಕರಾದ ಪ್ರಸಾದ್, ಹಾಗೂ ವಸತಿ ನಿಲಯ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...