ಕಾರವಾರ: ಡಿ.ಇಎಲ್.ಇಡಿ ಹಾಗೂ ಡಿ.ಪಿ.ಎಸ್.ಇ. ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ

Source: S.O. News service | By S O News | Published on 5th August 2021, 10:07 PM | Coastal News |

ಕಾರವಾರ: ಡಿ.ಇಎಲ್.ಇಡಿ ಹಾಗೂ ಡಿ.ಪಿ.ಎಸ್.ಇ. ಪ್ರಥಮ ಹಾಗೂ ದ್ವಿತೀಯ ಪರೀಕ್ಷೆಯು ಅಗಸ್ಟ್ 11 ರವರೆಗೆ ಜಿಲ್ಲೆಯ ಕುಮಟಾ ಡಯಟ್ ಕೇಂದ್ರದಲ್ಲಿ ನಡೆಯಲಿವೆ.

ಪರೀಕ್ಷಾ ದಿನಗಳಂದು ಪರೀಕ್ಷೆ ನಡೆಯುವ ಸಮಯದಿಂದ ಪರೀಕ್ಷೆ ಅವಧಿ ಮುಗಿಯುವವರೆಗೂ ಸದರಿ ಪ್ರದೇಶ ವ್ಯಾಪ್ತಿಯಲ್ಲಿ ಕಲಂ 144 ರಡಿ ನಿಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಬ್ಲ್ಯೂಟೂತ್ ಮತ್ತಿತರ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಅದೇ ರೀತಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲ ಜಿರಾಕ್ಸ್ ಅಂಗಡಿಗಳನ್ನು ಹಾಗೂ ಸೈಬರ್ ಕೆಫೆ ಗಳನ್ನು ಮುಚ್ಚುವಂತೆಯೂ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...