ದೆಹಲಿ ಅಬಕಾರಿ ಹಗರಣ: ಸಿಸೋಡಿಯಾ ನಿವಾಸದ ಮೇಲೆ ದಾಳಿ ಬೆನ್ನಲ್ಲೇ ಆರೋಪಿಗಳಿಗೆ ಸಿಬಿಐ ಸಮನ್ಸ್

Source: PTI | By MV Bhatkal | Published on 21st August 2022, 12:13 AM | National News |

ನವದೆಹಲಿ: ದೆಹಲಿ ಅಬಕಾರಿ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಸಿಬಿಐ ಶನಿವಾರ ಕೆಲವು ಆರೋಪಿಗಳನ್ನು ಸಮನ್ಸ್  ಜಾರಿಗೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 31 ಸ್ಥಳಗಳಲ್ಲಿ ದಾಳಿ ನಡೆಸಿದಾಗ ವಶಪಡಿಸಿಕೊಂಡ ದಾಖಲೆಗಳನ್ನು ಸಂಸ್ಥೆ ಪರಿಶೀಲಿಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು ಮತ್ತು ಬ್ಯಾಂಕ್ ವಹಿವಾಟುಗಳ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಇತರ ಆರೋಪಿಗಳಿಗೂ ಸಮನ್ಸ್ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ದಾಖಲಾಗಿರುವ ಸಿಬಿಐ ಎಫ್‌ಐಆರ್ ಅನ್ನು ಹಣಕಾಸು ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯದೊಂದಿಗೆ ಹಂಚಿಕೊಳ್ಳಲಾಗಿದ್ದು, ಇದು ಅಕ್ರಮ ಹಣ ವರ್ಗಾವಣೆಯ ಆರೋಪಗಳನ್ನು ಪರಿಶೀಲಿಸಲಿದೆ.

ನವೆಂಬರ್‌ನಲ್ಲಿ ಬಿಡುಗಡೆಯಾದ ದೆಹಲಿ ಅಬಕಾರಿ ನೀತಿಯ ಬಗ್ಗೆ ತನಿಖಾ ಸಂಸ್ಥೆಯು ಎಫ್‌ಐಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದೆ. ದೆಹಲಿ ಅಬಕಾರಿ ನೀತಿಯ ಅಡಿಯಲ್ಲಿ ಮದ್ಯದ ಅಂಗಡಿ ಪರವಾನಗಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...