ದಿಲ್ಲಿ ದಂಗೆಗಳು: ಅಸಡ್ಡೆಗಾಗಿ ಪೊಲೀಸ್ ಅಧಿಕಾರಿಯಿಂದ ದಂಡ

Source: VB | Published on 30th September 2021, 8:51 PM | National News |

ಹೊಸದಿಲ್ಲಿ: ಈಶಾನ್ಯ ದಿಲ್ಲಿಯಲ್ಲಿ ಕಳೆದ ವರ್ಷದ ಫೆಬ್ರವರಿಯಲ್ಲಿ ಸಂಭವಿಸಿದ್ದ ದಂಗೆಗಳಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ತನ್ನ ಮುಂದೆ ಹಾಜರಾಗಲು ವಿಫಲಗೊಂಡಿದ್ದ ಮತ್ತು ವಿಚಾರಣೆಯನ್ನು ಮುಂದೂಡುವಂತೆ ಕೋರಿದ್ದ ಪೊಲೀಸ್ ಅಧಿಕಾರಿಯ ವಿರುದ್ಧ ವಿಚಾರಣೆ ನಡೆಸುವಂತೆ ಮತ್ತು ಅವರ ವೇತನದಿಂದ 5,000 ರೂ. ಕಡಿತಗೊಳಿಸುವಂತೆ ಇಲ್ಲಿಯ ಮುಖ್ಯ ಮಹಾನಗರ ನ್ಯಾಯಾಲಯವು ದಿಲ್ಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಪದೇ ಪದೇ ಆದೇಶಿಸಿದ್ದರೂ ಪೊಲೀಸ್ ಅಧಿಕಾರಿ ವಿಚಾರಣೆಗೆ ಹಾಜರಾಗಲು ವಿಫಲರಾಗಿದ್ದರು ಎಂದು ನ್ಯಾಯಾಲಯವು ಬೆಟ್ಟು ಮಾಡಿದೆ.

ದಂಗೆ ಪ್ರಕರಣಗಳಲ್ಲಿ ಹೆಸರಿಸಲಾಗಿ ರುವ ಆರೋಪಿಗಳಿಗೆ ಜಾಮೀನು ಮ೦ಜೂರು ಮಾಡಿರುವ ನ್ಯಾಯಾಲಯದ ಹಲವಾರು ಆದೇಶಗಳಲ್ಲಿ ದಿಲ್ಲಿ ಪೊಲೀಸರ ತನಿಖಾ ವೈಖರಿಯನ್ನು ಟೀಕಿಸಿರುವುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

ವಿಶೇಷ ಸರಕಾರಿ ಅಭಿಯೋಜ ಕರು ಮತ್ತು ತನಿಖಾಧಿಕಾರಿಗಳು ನಿಗದಿತ ದಿನಾ೦ಕಗ೮೦ದು ವಿಚಾರಣೆಗೆ ಹಾಜರಾಗುತ್ತಿಲ್ಲ ಮತ್ತು ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಹಾಜರಾದಾಗ ಕಡತಗಳ ಬಗ್ಗೆ ಯಾವುದೇ ಮಾಹಿತಿಗಳನ್ನು ಹೊಂದಿರುವುದಿಲ್ಲ ಹಾಗೂ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳದೆ ಪ್ರಕರಣವನ್ನು ಮುಂದೂಡುವಂತೆ ಕೋರುತ್ತಾರೆ ಎಂದು ನ್ಯಾ.ಎ.ಕೆ.ಗರ್ಗ್ ಅವರು ತನ್ನ ಸೆ.25ರ ಆದೇಶದಲ್ಲಿ ಹೇಳಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...