ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ತಲುಪಿಸಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

Source: SO News | By Laxmi Tanaya | Published on 28th September 2021, 10:17 PM | State News | Don't Miss |

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ಶೀಘ್ರವಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.

   ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಫಲಾನುಭವಿಗಳ ಆಯ್ಕೆಯ ಸಂದರ್ಭದಲ್ಲಿ ಅಧಿಕಾರಿಗಳು ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವ ಮುಖೇನ ನಿಗದಿತ ಸಮಯದಲ್ಲಿ ಅರ್ಹರಿಗೆ ಸೌಲಭ್ಯ ಒದಗಿಸಬೇಕೆಂದು ತಿಳಿಸಿದರು.

   ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳು ಕಾಲ ಕಾಲಕ್ಕೆ ಸಭೆಗಳನ್ನು ನಡೆಸಿ, ಕುಂದು- ಕೊರತೆಗಳನ್ನು ಆಲಿಸಿ, ಪ್ರಾಥಮಿಕ ಹಂತದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದರಲ್ಲದೆ, ಎಲ್ಲಾ ಅಧಿಕಾರಿಗಳು ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರ ಸಲಹೆ ಮೇರೆಗೆ ಜಿಲ್ಲಾ ಮಟ್ಟದ ಸಭೆಯಲ್ಲಿ ಕ್ಲಿಷ್ಟಕರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

   ಸ್ಮಶಾನದ ಸಮಸ್ಯೆ ಇರುವ ಗ್ರಾಮಗಳಲ್ಲಿ ಶೀಘ್ರವೇ ಭೂಮಿಯನ್ನು ಗುರುತಿಸುವಂತೆ ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸ್ಮಶಾನ ನೀಡಲು ಸಾಧ್ಯವಿರದ ಕಾರಣ ಎಲ್ಲರೂ ಸಾರ್ವಜನಿಕ ಸ್ಮಶಾನವನ್ನು ಬಳಕೆ ಮಾಡಬೇಕು ಹಾಗೂ ಸ್ಮಶಾನದ ಜಾಗವನ್ನು ಯಾರೂ ಸಹ ಅತಿಕ್ರಮಣ ಮಾಡದಂತೆ ಕಾಂಪೌಂಡ್ ನಿರ್ಮಾಣ ಮಾಡುವಂತೆ ಸೂಚಿಸಿದರು.

   ಕೋವಿಡ್‌ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ಶೀಘ್ರವೇ ಒಂದು ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗುವುದು ಎಂದರಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಅಂತರ್ಜಾತಿ ವಿವಾಹವಾದವರಿಗೆ ನೀಡುವ ಪ್ರೋತ್ಸಾಹಧನವನ್ನು ತುರ್ತಾಗಿ ಬಿಡುಗಡೆ ಮಾಡಬೇಕು ಎಂದು ತಿಳಿಸಿದರು.

   ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲೆ ದೌರ್ಜನ್ಯ ನಡೆದಲ್ಲಿ, ವಿಳಂಬ ಮಾಡದೆ ತಕ್ಷಣ ಪ್ರಕರಣಗಳನ್ನು ದಾಖಲಿಸಬೇಕು ಹಾಗೂ ದೌರ್ಜನ್ಯಕ್ಕೆ ಒಳಗಾದವರಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುವ ಪರಿಹಾರಧನವನ್ನು ಶೀಘ್ರವಾಗಿ ನೀಡಬೇಕು ಎಂದರಲ್ಲದೆ, ಸುಳ್ಳು ಪ್ರಕರಣಗಳು ದಾಖಲಾಗಿದ್ದರೆ ಕಾನೂನಿನ ಪ್ರಕಾರ ತನಿಖೆ ನಡೆಸಿ, ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

   ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಲಕ್ಷೀ ಗಣೇಶ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ, ಡಿವೈಎಸ್ಪಿಗಳಾದ ಟಿ.ರಂಗಪ್ಪ, ಜಗದೀಶ್, ಉಮಾಶಂಕರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭವ್ಯಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ. ಸೇರಿದಂತೆ ತಹಶೀಲ್ದಾರ್‌ಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...