ದುರ್ಬಲ ಮಹಿಳೆಯರಿಗೆ ಸರಕಾರದ ಸೌಲಭ್ಯಗಳನ್ನು ತಲುಪಿಸಿ : ಡಾ. ರಾಜೇಂದ್ರ ಕೆ.ವಿ.

Source: so news | By MV Bhatkal | Published on 20th June 2021, 12:05 PM | Coastal News |

ಮಂಗಳೂರ:ಜಿಲ್ಲೆಯ ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು ಹಾಗೂ ಹೆಚ್. ಐ.ವಿ ಸೋಂಕಿತ ಮಹಿಳೆಯರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ತಲುಪಿಸುವ ಕೆಲಸ ಅವರುಗಳಿಗೆ ಕೋವಿಡ್ ಚುಚ್ಚು ಮದ್ದು ಕೊಡಿಸುವ ಕೆಲಸವನ್ನು  ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು ಹಾಗೂ ಹೆಚ್.ಐ.ವಿ ಸೋಂಕಿತ ಮಹಿಳೆಯರ ಪಡಿತರ ಹಾಗೂ ಕೋವಿಡ್19 ಲಸಿಕೆ ಒದಗಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸರಕಾರ ಮಹಿಳೆಯರ ಕಲ್ಯಾಣ ಅಭಿವೃದ್ಧಿಗೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಇವುಗಳ ಬಗ್ಗೆ ಅವರುಗಳಿಗೆ ಮಾಹಿತಿ ನೀಡುವುದರೊಂದಿಗೆ ಫಲಾನುಭವಿಗಳಾಗಿಸಬೇಕು ಎಂದರು.
ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರಿಗೋಸ್ಕರ ಜಾರಿಗೆ ತಂದಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಅವರಿಗೆ ಅರಿವು ಮೂಡಿಸಿ, ಅವರನ್ನು ಫಲಾನುಭವಿಗಳನ್ನಾಗಿಸಬೇಕು ಎಂದರು.
ಲಾಕ್‍ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಲಿಂಗತ್ವ ಅಲ್ಪಸಂಖ್ಯಾತರಲ್ಲಿ 134 ಜನರ ನೊಂದಾಣಿಯಾಗಿದ್ದು, ಇವರಲ್ಲಿ 125 ಜನರಿಗೆ ಪಡಿತರ ಚೀಟಿ ನೀಡಲಾಗಿದೆ. ಉಳಿದಿರುವ 9 ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಪಡಿತರ ಚೀಟಿ ವಿತರಿಸುವ  ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
920 ನೊಂದಾಯಿತ ದಮನಿತ ಮಹಿಳೆಯರ ಪೈಕಿ ಈಗಾಗಲೇ 901 ಮಹಿಳೆಯರು ಪಡಿತರ ಚೀಟಿ ಹೊಂದಿದ್ದ್ದು, ಬಾಕಿ ಉಳಿದ 19 ಜನರಿಗೆ ಶೀಘ್ರದಲ್ಲಿಯೇ ಪಡಿತರ ಚೀಟಿ ನೀಡಬೇಕು ಎಂದ ಅವರು  ಲಾಕ್‍ಡೌನ್ ಸಮಯದಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ 4515 ಜನ ಹೆ.ಐ.ವಿ ಸೋಂಕಿತ ಮಹಿಳೆಯರು ನೋಂದಣಿಯಾಗಿದು,್ದ 4369 ಮಹಿಳೆಯರಿಗೆ ಈಗಾಗಲೇ ಪಡಿತರ ಚೀಟಿ ನೀಡಲಾಗಿದೆ ಇನ್ನುಳಿದ 146 ಜನ ಹೆಚ್.ಐ.ವಿ ಸೋಂಕಿತರು ಪಡಿತರ ಚೀಟಿ ಹೊಂದಿರುವುದಿಲ್ಲ ಇವರಲ್ಲಿ ಅರ್ಹತೆ ಹೊಂದಿರುವವರಿಗೆ  ಸಹ ಪಡಿತರ ಚೀಟಿ  ವಿತರಿಸಬೇಕು ಎಂದರು.
ಹೆಚ್.ಐ.ವಿ ಸೋಂಕಿತರಿಗೆ ಔಷದಿ ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳು ಸರಿಯಾಗಿ ಕಾಲ ಕಾಲಕ್ಕೆ ದೊರಕುತ್ತಿದೆಯೇ ಎಂಬ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವುದರೊಂದಿಗೆ ಅಧಿಕಾರಿಗಳು ತಮ್ಮ ಹಂತದಲ್ಲಿ ಅವರ ಸಮಸ್ಯೆಗಳಿಗೆ ಪರಿಹಾರ ದೊರಕದೇ ಇದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.
ಮನೆಯ ವಿಳಾಸ ಇಲ್ಲದೇ ಇರುವ ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು ಹಾಗೂ ಹೆಚ್.ಐ.ವಿ ಸೋಂಕಿತ ಮಹಿಳೆಯರಿಗೆ ಪಡಿತರ ಸಾಮಾಗ್ರಿಗಳು ದೊರಕದೇ ಇದ್ದಂತಹ ಸಂದರ್ಭದಲ್ಲಿ ಸಂಬಂಧಪಟ್ಟಿರುವ ಅಧಿಕಾರಿಗಳು ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಲ್ಲಿ ಅವರು  ಮುಂದಿನ ಕ್ರಮ ವಹಿಸಲು ಸೂಚಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಾಪ ಭೋವಿ, ಜಿಲ್ಲಾಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಆಡಿಷನಲ್ ಎಸ್.ಪಿ ಬಾಸ್ಕರ್, ವೆನ್‍ಲಾಕ್ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಸದಾಶಿವ ಶಾನ್‍ಭೋಗ್, ಎನ್.ಜಿ.ಓ ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...