ಹರ್ಯಾಣ: ವಲಸೆ ಕಾರ್ಮಿಕರ ಗುಡಿಸಲು ನೆಲಸಮ; ಕಾನೂನು ಪ್ರಕಾರ ನೋಟಿಸು ನೀಡಲಾಗಿದೆಯೇ ?: ಸಾಕೇತ್ ಗೋಖಲೆ

Source: Vb | By I.G. Bhatkali | Published on 7th August 2023, 10:31 AM | National News |

ಕೋಲ್ಕತಾ: ಹರ್ಯಾಣದ ನೂಹನಲ್ಲಿ ನಡೆದ ಕೋಮು ಗಲಭೆ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ಗುಡಿಸಲುಗಳನ್ನು ಆಡಳಿತ ಬುಲ್ಲೋಜರ್ ಬಳಸಿ ನೆಲಸಮಗೊಳಿಸಿರುವುದನ್ನು ಟಿಎಂಸಿ ನಾಯಕ ಹಾಗೂ ರಾಜ್ಯ ಸಭಾ ಸದಸ್ಯ ಸಾಕೇತ್ ಗೋಖಲೆ ರವಿವಾರ ಪ್ರಶ್ನಿಸಿದ್ದಾರೆ.

ಅವರು ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ ಹಾಗೂ ಉಪ ವಿಭಾಗೀಯ ದಂಡಾಧಿಕಾರಿ ಈ ಪ್ರಶ್ನೆಗಳಿಗೆ ಉತ್ತರಿಸುವಂತೆ ಆಗ್ರಹಿಸಿದ್ದಾರೆ.

ಕಪ್ಯೂ ಜಾರಿಯಲ್ಲಿರುವ ಸಂದರ್ಭ ಈ ಗುಡಿಸಲುಗಳನ್ನು ನೆಲಸಮ ಮಾಡಿರುವುದು ಯಾಕೆ?

ಇತ್ತೀಚೆಗೆ ನಡೆದ ಹಿಂಸಾಚಾರದ ನಂತರವೇ ಈ ಗುಡಿಸಲುಗಳು ಅತಿಕ್ರಮಣ ಎಂದು ಸರಕಾರಕ್ಕೆ ಹೇಗೆ ಗೊತ್ತಾಯಿತು? ಕಾನೂನು ಪ್ರಕಾರ ಅವರಿಗೆ ಯಾವುದಾದರೂ ನೋಟಿಸ್‌ಗಳನ್ನು ನೀಡಲಾಗಿದೆಯೇ? ಎಂದು ಗೋಖಲೆ ಪ್ರಶ್ನಿಸಿದ್ದಾರೆ.

ಈ ಗುಡಿಸಲುಗಳಲ್ಲಿ ವಾಸಿಸುವ ಜನರು ಅಕ್ರಮ ವಲಸಿಗರು ಎಂದಾದರೆ, ನನ್‌ನ ಉಪ ವಿಭಾಗೀಯ ದಂಡಾಧಿಕಾರಿ ಅದನ್ನು ಹೇಗೆ ಗುರುತಿಸಿದರು ಹಾಗೂ ನಿರ್ಧರಿಸಿದರು ? 1967ರ ಪಾಸ್‌ ಪೋರ್ಟ್ ಕಾಯ್ದೆ ಅಡಿಯಲ್ಲಿ ಎಷ್ಟು ಪ್ರಕರಣಗಳು ದಾಖಲಾಗಿವೆ ಎಂದು ಅವರು ಪ್ರಶ್ನಿಸಿದ್ದಾರೆ.

“ಈ ಹಿಂಸಾಚಾರದಲ್ಲಿ ಪಾಲ್ಗೊಂಡ ಹಾಗೂ ಕಾನೂನು ಬಾಹಿರವಾಗಿ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ಕೊಂಡೊಯ್ದ ಎಷ್ಟು ಮಂದಿ ವಿಶ್ವಹಿಂದೂ ಪರಿಷತ್ ಗೂಂಡಾಗಳು, ಇತರರ ಮನೆಗಳನ್ನು ಗುರುತಿಸಲಾಗಿದೆ ಹಾಗೂ ನೆಲಸಮ ಗೊಳಿಸಲಾಗಿದೆ' ಎಂದು ಅವರು ಪ್ರಶ್ನಿಸಿದ್ದಾರೆ.

ಕೋಮು ಗಲಭೆಯಲ್ಲಿ ಭಾಗಿಯಾಗಿರುವ ವಿಶ್ವಹಿಂದೂ ಪರಿಷತ್ ಗೂಂಡಾಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಯಾಕೆ? ಎಂಬ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ತುರ್ತ ಸ್ಪಷ್ಟನೆ ನೀಡಬೇಕು ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...