ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆ

Source: so news | By MV Bhatkal | Published on 9th March 2019, 12:27 AM | State News | Don't Miss |

ಬೀದರ:ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಾ.7ರಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಂಡೆಪ್ಪ ಖಾಶೆಂಪೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಬರ ಪರಿಶೀಲನಾ ಸಭೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆ ನಡೆಯಿತು.
ಸಚಿವರಾದ ಬಂಡೆಪ್ಪ ಖಾಶೆಂಪೂರ,  ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ನಾರಾಯಣರಾವ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಭಾರತಬಾಯಿ ಶೇರಿಕಾರ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ಜಿಪಂ ಉಪಾಧ್ಯಕ್ಷರಾದ ಡಾ.ಪ್ರಕಾಶ ಪಾಟೀಲ್, ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಮಹಾಂತೇಶ ಬೀಳಗಿ ಅವರು ಮತ ಚಲಾಯಿಸಿ ಗಮನ ಸೆಳೆದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಮಹಾಂತೇಶ ಬೀಳಗಿ ಅವರು ಮಾತನಾಡಿ, ವಿದ್ಯುನ್ಮಾನ ಮತಯಂತ್ರಗಳು ಸತ್ಯದ ಕೈಗನ್ನಡಿ ಇದ್ದಂತೆ ಈ ಯಂತ್ರಗಳು ಪಾರದರ್ಶಕತೆಯಿಂದ ಕೂಡಿವೆ ಎಂಬುದನ್ನು ಮತ್ತೆ ಮತ್ತೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಸಭೆ, ಸಮಾರಂಭಗಳಲ್ಲಿ ಯಂತ್ರಗಳ ಪ್ರಾತ್ಯಕ್ಷಿಕೆಯನ್ನು ನೀಡುತ್ತಿದ್ದೇವೆ. ಜಿಲ್ಲೆಯಲ್ಲಿ ಈಗಾಗಲೇ ಈ ಮತಯಂತ್ರಗಳ ಬಗ್ಗೆ ಸಾಕಷ್ಟು ಕಾರ್ಯಕ್ರಮಗಳಲ್ಲಿ ಜಾಗೃತಿ ಮೂಡಿಸಲಾಗಿದೆ. ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಚುನಾವಣಾ ಮಾಸ್ಟರ್ ಟ್ರೇನರ್ ರಮೇಶ ಮಠಪತಿ ಅವರು ಮಾತನಾಡಿ, ಈ ವಿದ್ಯುನ್ಮಾನ ಮತಯಂತ್ರಗಳು ಪಾರದರ್ಶಕತೆಯ ವಿಷಯದಲ್ಲಿ ಕ್ರಾಂತಿ ಮಾಡಿವೆ. ಈ ಯಂತ್ರಗಳ ಬಗ್ಗೆ ಕೆಲವರು ಆರೋಪಿಸಿದರೂ ಅಂತಿಮವಾಗಿ ಸತ್ಯದ ಕೈಗನ್ನಡಿ ಎಂದು ಗೊತ್ತಾಗಿದೆ. ಈ ಮತಯಂತ್ರಗಳನ್ನು ಮತದಾನ ಸಂದರ್ಭದಲ್ಲಿ ಹೇಗೆ ಬಳಸಬೇಕು ಎಂದು ಜನತೆಗೆ ತಿಳಿಸುವ ದಿಶೆಯಲ್ಲಿ ಈ ರೀತಿಯ ತರಬೇತಿ ಕಾರ್ಯಗಳನ್ನು ರೂಪಿಸಲಾಗುತ್ತಿದೆ ಎಂದರು. ಈ ವೇಳೆ ಜಿಲ್ಲಾ ಮಟ್ಟದ ಚುನಾವಣಾ ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...