ಅಂಜುಮನ್ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಕೈತೊಳೆಯುವ ವಿಧಾನಗಳ ಪ್ರಾತ್ಯಕ್ಷಿತೆ

Source: SO News | By Laxmi Tanaya | Published on 6th August 2022, 10:34 PM | State News | Don't Miss |

ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಅಂಜುಮನ್ ಪ್ರೌಢಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಕೈ ತೊಳೆದುಕೊಳ್ಳುವ ವಿಧಾನಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. 

ಜಿಲ್ಲಾ ಆರ್.ಸಿ.ಹೆಚ್.ಒ ಅಧಿಕಾರಿ ಡಾ.ಎಸ್.ಎಂ ಹೊನಕೇರಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಊಟಕ್ಕೆ ಮೊದಲು ಹಾಗೂ ಶೌಚದ ನಂತರ ಕೈಗಳನ್ನು ಸಾಬೂನಿನಿಂದ ತೊಳೆದುಕೊಳ್ಳಬೇಕು. ಎರಡು ಕೈಗಳನ್ನು ನೀರಿನಿಂದ ಒದ್ದೆ ಮಾಡಿ, ಸಾಬೂನು ಹಚ್ಚಬೇಕು. ಕೈಯನ್ನು ಅಂಗೈ ಒಂದರ ಮೇಲೊಂದಿಟ್ಟು ಸೋಪಿನ ನೊರೆಯೊಂದಿಗೆ ಉಜ್ಜಬೇಕು. ಅಂಗೈಗಳನ್ನು ಹಿಂದು ಮುಂದು ಮಾಡಿ ಮತ್ತು ಬೆರಳುಗಳ ಮಧ್ಯೆ ಉಜ್ಜಬೇಕು. ಉಗುರುಗಳನ್ನು ಇನ್ನೊಂದು ಹಸ್ತಕ್ಕೆ ತಾಕಿಸಿ ಉಜ್ಜಿ, ಎರಡು ಕೈಗಳ ಮಣಿಕಟ್ಟುಗಳನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಎರಡು ಕೈಗಳನ್ನು ಸಂಪೂರ್ಣವಾಗಿ ನೀರಿನಿಂದ ತೊಳೆದುಕೊಂಡು ಸ್ವಚ್ಛ ಮಾಡಿಕೊಳ್ಳಬೇಕು ಎಂದು ಕೈ ತೊಳೆಯುವ ವಿಧಾನಗಳ ಕುರಿತು ಪ್ರಾತ್ಯಕ್ಷತೆ ಮಾಡಿ ತೋರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳು, ಇತರ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...