ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಣೆ; ಆತ್ಮಹತ್ಯೆಗೆ ಶರಣಾದ ಕುಮಟಾದ ಯುವಕ

Source: sonews | By Staff Correspondent | Published on 4th June 2018, 11:46 PM | Coastal News | State News | National News | Special Report | Don't Miss |

ಹೊಸದಿಲ್ಲಿ: ಪರೀಕ್ಷೆ ಹಾಲ್‌ಗೆ ಪ್ರವೇಶಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ 28 ಹರೆಯದ ಯುಪಿಎಸ್‌ಸಿ ಆಕಾಂಕ್ಷಿ ಯುವಕ ರವಿವಾರ ದಿಲ್ಲಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಡವಾಗಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕದ ಉತ್ತರಕನ್ನಡ ಜಿಲ್ಲೆಯ ಕುಮಟಾ ಮೂಲದ ವರುಣ್‌ನನ್ನು ಉತ್ತರ ದಿಲ್ಲಿಯ ಪಹಾರ್‌ಗಂಜ್ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಿರಲಿಲ್ಲ. ಇದರಿಂದ ಮನನೊಂದ ವರುಣ್ ರಾಜೇಂದ್ರ ನಗರದಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘‘ನಿಯಮ ಇರುವುದು ಉತ್ತಮ. ಆದರೆ, ಕೆಲವು ರಿಯಾಯಿತಿ ನೀಡಬೇಕು’’ ಎಂದು ಬರೆದ ವರುಣ್‌ರ ಸೂಸೈಡ್ ನೋಟ್ ಅನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸೂಸೈಡ್ ನೋಟ್‌ನಲ್ಲಿ ವರುಣ್ ತನ್ನ ಕುಟುಂಬದ ಕ್ಷಮೆ ಯಾಚಿಸಿದ್ದಾರೆ ಹಾಗೂ ತನ್ನನ್ನು ಮರೆತು ಬಿಡುವಂತೆ ಮನವಿ ಮಾಡಿದ್ದಾರೆ. ವರುಣ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಮೊದಲು ನೋಡಿರುವುದು ಅವರ ಗೆಳತಿ. ಅವರು ಕೂಡ ಯುಪಿಎಸ್‌ಸಿ ಪರೀಕ್ಷೆ ಬರೆಯುತ್ತಿದ್ದರು.

 ‘‘ನಾನು ಕರೆ ಮಾಡುತ್ತಿದ್ದೆ. ಆದರೆ, ಅವರು ಇಡೀ ದಿನ ಕರೆ ಸ್ವೀಕರಿಸಲಿಲ್ಲ. ಆದುದರಿಂದ ಪರಿಶೀಲಿಸಲು ನಾನು ಅವರ ಬಾಡಿಗೆ ಕೊಠಡಿಗೆ ತೆರಳಿದ್ದೆ. ಆದರೆ, ವರುಣ್ ಬಾಗಿಲು ತೆರೆಯಲಿಲ್ಲ. ಅನುಮಾನ ಬಂದು ಕಿಟಕಿಯಿಂದ ನೋಡಿದೆ. ವರುಣ್‌ನ ಮೃತದೇಹ ಸೀಲಿಂಗ್ ಫ್ಯಾನ್‌ನಲ್ಲಿ ನೇತಾಡುತ್ತಿತ್ತು ಎಂದು ವರುಣ್ ಗೆಳತಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ವರುಣ್ ದೀರ್ಘಾವಧಿಯಿಂದ ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ಮಾಡುತ್ತಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ವರುಣ್ ಮೃತದೇಹವನ್ನು ದಿಲ್ಲಿಯಲ್ಲೇ ವಾಸಿಸುತ್ತಿರುವ ಅವರ ಸಹೋದರಿಗೆ ಬಿಟ್ಟು ಕೊಡಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...