ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Source: SO News | By Laxmi Tanaya | Published on 2nd June 2023, 10:11 PM | Coastal News | Don't Miss |

ಬಳ್ಳಾರಿ : ಮೀನುಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಗಳಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳೊಡನೆ ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ https://ballari.nic.in ವೆಬ್‍ಸೈಟ್‍ನಲ್ಲಿ ಮತ್ತು ವಿಜಯನಗರ ಜಿಲ್ಲೆಗೆ ಸಂಬಂಧಿಸಿದಂತೆ https://vijayanagara.nic.in  ವೆಬ್‍ಸೈಟ್‍ಗೆ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು ಅಥವಾ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆ ಕಚೇರಿ ಮುಖಾಂತರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜೂನ್ 15 ರೊಳಗಾಗಿ ಸಲ್ಲಿಸಬಹುದಾಗಿದೆ.

ಯೋಜನೆಗಳ ವಿವರ:  ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನು ಕೃಷಿಕರು ಮೀನು ಕೃಷಿ ಕೊಳ ನಿರ್ಮಾಣ ಮಾಡಲು ರೂ.4.40 ಲಕ್ಷಗಳ (ಒಂದು ಹೆಕ್ಟೇರ್ ಕೊಳಕ್ಕೆ) ಸಹಾಯಧನ ನೀಡಲಾಗುವುದು.
ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನು ಕೃಷಿಕರಿಗೆ ರೂ.10 ಸಾವಿರ ವೆಚ್ಚದಲ್ಲಿ ಉಚಿತ ಫೈಬರ್ ಗ್ಲಾಸ್ ಹರಿಗೋಲುಗಳನ್ನು ವಿತರಿಸಲಾಗುವುದು.
ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನು ಕೃಷಿಕರಿಗೆ ರೂ.10 ಸಾವಿರ ವೆಚ್ಚದಲ್ಲಿ ಉಚಿತ ಮೀನುಗಾರಿಕೆ ಸಲಕರಣೆ ಕಿಟ್ಟುಗಳನ್ನು ವಿತರಿಸಲಾಗುವುದು.

ಮೀನು ಮಾರುಕಟ್ಟೆಗಳ ನಿರ್ಮಾಣ ಮತ್ತು ಮೀನು ಮಾರಾಟಕ್ಕೆ ಸಹಾಯ ಮತ್ಸ್ಯವಾಹಿನಿ ಯೋಜನೆಯಡಿ ಐಸ್‍ಬಾಕ್ಸ್ ನೊಂದಿಗೆ ಮೊಪೆಡ್ ಮತ್ತು ಸೈಕಲ್ ಖರೀದಿಸಲು ಸಹಾಯಧನ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕುಗಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ, ಕುರುಗೋಡು, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹಡಗಲಿ  ತಾಲೂಕು ವ್ಯಾಪ್ತಿಯವರು ಶಿವಣ್ಣ ಮೊ. 9449593156 ಮತ್ತು ಸಂಡೂರು, ಹೊಸಪೇಟೆ ಹಾಗೂ ಹರಪನಹಳ್ಳಿ ತಾಲೂಕು ವ್ಯಾಪ್ತಿಯವರು ಜಿ. ಶಾಂತಕುಮಾರ್ ಮೊ.9620177588 ಇವರನ್ನು ಸಂಪರ್ಕಿಸಬಹುದು ಎಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...