ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ

Source: SO News | By Laxmi Tanaya | Published on 18th July 2023, 8:54 PM | State News |

ಬೆಂಗಳೂರು : ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. 

ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎನ್ನುವ ವಿರೋಧ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ. 

ರಾಜ್ಯಕ್ಕೆ ಆಗಮಿಸಿದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ರಾಜ್ಯದ ಅತಿಥಿಗಳಾಗಿದ್ದರು. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಂತೆಯೇ ನಡೆದಿದೆ. ಇಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಬದಲಿಗೆ ಶಿಷ್ಟಾಚಾರದ ಪ್ರಕಾರವೇ ಗಣ್ಯರ ಸ್ವಾಗತಕ್ಕಷ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತೇ ಹೊರತು ರಾಜಕೀಯ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ಬಳಸಿಕೊಂಡಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಬದ್ಧತೆ ನಮ್ಮ ಮುಖ್ಯ ಗುರಿಯಾಗಿರಬೇಕು. ಆಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...