ಲೋಪ ರಹಿತ ಚುನಾವಣೆಗೆ ಶ್ರಮಿಸಲು ಜಿಲ್ಲಾಧಿಕಾರಿ ಕರೆ

Source: so news | By MV Bhatkal | Published on 30th March 2019, 1:08 AM | State News | Don't Miss |

ಹಾಸನ:ಮುಂಬರುವ ಲೋಕಸಭಾ ಚುನಾವಣೆಯನ್ನು ಲೋಪರಹಿತವಾಗಿ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಶೀಲ್ದಾರರ ಸಭೆ ನಡೆಸಿದ ಅವರು ಈವರೆಗೆ ಅತ್ಯತ್ತಮವಾಗಿ ಹಾಗೂ ಸಾಂಘಿಕವಾಗಿ ಚುನಾವಣಾ ಕರ್ತವ್ಯ ನಡೆಯುತ್ತಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಾಳಜಿ ಮತ್ತು ಶ್ರಮವಹಿಸಿ ಕೆಲಸ ನಿರ್ವಹಿಸಿ ಎಂದರು.
ಚೆಕ್ ಪೋಸ್ಟ್‍ಗಳಲ್ಲಿ ವ್ಯವಸ್ಥಿತ ತಪಾಸಣೆ ನಡೆಯಬೇಕು, ಹಾಸನ ತಾಲ್ಲೂಕಿನಂತೆ ಇತರ ತಾಲ್ಲೂಕುಗಳಲ್ಲಿಯೂ ವೆಬ್ ಕಾಸ್ಟಿಂಗ್ ಮೂಲಕ ಚೆಕ್ ಪೋಸ್ಟ್‍ಗಳ ಮೇಲೆ ನಿಗಾವಹಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹೇಳಿದರು.
ಸೆಕ್ಟರ್ ಅಧಿಕಾರಿಗಳು ಫ್ಲೈಂಯಿಂಗ್ ಸ್ಕಾರ್ಡ್‍ಗಳ ಸ್ಟಾಟಿಕ್, ಸರ್ವೆಲೆನ್ಸ್ ತಂಡಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹೆಚ್ಚಿನ ನಿಗಾವಹಿಸಬೇಕು. ತಮ್ಮ ಸಂಚಾರ ಹಾಗೂ ತಪಾಸಣೆ ನಡೆಸಬೇಕು ಯಾವುದೇ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಿ ಎಂದು ಅಕ್ರಂ ಪಾಷ ತಿಳಿಸಿದರು.
ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ ಅವರು ಮಸ್ಟರಿಂಗ್ ಕೇಂದ್ರದಲ್ಲಿ ಆಗಬೇಕಿರುವ ವ್ಯವಸ್ಥೆ, ಸಿಬ್ಬಂದಿ ನಿಯೋಜನೆ, ಸಾರಿಗೆ, ಡಿಮಸ್ಟರಿಂಗ್‍ಗೆ ಸಿದ್ದತೆಗಳ ಕುರಿತು ಸಲಹೆ ಸೂಚನೆಗಳನ್ನು ನೀಡಿದರು. ಯಾವುದೇ ಗೊಂದಲಗಳು ಇಲ್ಲದಂತೆ ಈ ಪ್ರಕ್ರಿಯೆಗಳನ್ನು ನಡೆಸುವಂತೆ ತಿಳಿಸಿದರು.
ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರರು ಸಭೆಯಲ್ಲಿ ಹಾಜರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...