ಇಲೆಕ್ಟ್ರಾನಿಕ್ ವ್ಯಾಕ್ಸಿನ್ ಇಂಟಲಿಜನ್ಸ್ ನೆಟ್‌ವರ್ಕ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಚಾಲನೆ

Source: so news | Published on 12th November 2019, 12:12 AM | State News | Don't Miss |

ಧಾರವಾಡ : ಸಾರ್ವಜನಿಕ ಲಸಿಕಾ ಕಾರ್ಯಕ್ರಮದ ಬಲ ವೃದ್ಧಿಸುವ ಇವಿಐಎನ್ (eಗಿIಓ ಇಲೆಕ್ಟ್ರಾನಿಕ್ ವ್ಯಾಕ್ಸಿನ್ ಇಂಟಲಿಜನ್ಸ್ ನೆಟ್‌ವರ್ಕ್) ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಇಂದು ಬೆಳಿಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಚಾಲನೆ ನೀಡಿದರು.

ಅವರು ಮಾತನಾಡಿ, ಲಸಿಕೆಗಳ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳಲು ಲಸಿಕಾ ಸಂಗ್ರಹ ವ್ಯವಸ್ಥೆಯ ಆಧುನೀಕರಣಕ್ಕೆ ಆಧ್ಯತೆ ನೀಡಲಾಗುತ್ತಿದೆ. ಭಾರತ ಸರ್ಕಾರವು ರಾಷ್ಟçವ್ಯಾಪಿಯಾಗಿ ಏಕಕಾಲಕ್ಕೆ ಹಮ್ಮಿಕೊಳ್ಳುವ ವಿವಿಧ ಲಸಿಕಾ ಅಭಿಯಾನಗಳಲ್ಲಿ ಸಕಾಲಕ್ಕೆ ಉತ್ತಮ ಗುಣಮಟ್ಟದ ಲಸಿಕೆಗಳನ್ನು ವಿತರಿಸಲು ಅನುಕೂಲವಾಗುವಂತೆ ಇವಿಐಎನ್ (eಗಿIಓ ಇಲೆಕ್ಟ್ರಾನಿಕ್ ವ್ಯಾಕ್ಸಿನ್ ಇಂಟಲಿಜನ್ಸ್ ನೆಟ್‌ವರ್ಕ್) ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಧಾರವಾಡ ಜಿಲ್ಲೆಯಲ್ಲೂ ಈ ವ್ಯವಸ್ಥೆ ಯಶಸ್ವಿಯಾಗಿ ಮುಂದುವರಿಯುತ್ತಿದೆ ಎಂದು ಹೇಳಿದರು.

ನಂತರ ಯುಎನ್‌ಡಿಪಿ ರಾಜ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ. ಅಂಜನಾ ಅವರು ಮಾತನಾಡಿ, ಇಲೆಕ್ಟಾçನಿಕ್ ಲಸಿಕಾ ಸುದ್ದಿ ಸಂಪರ್ಕ ಇವಿಐಎನ್ (eಗಿIಓ ಇಲೆಕ್ಟ್ರಾನಿಕ್ ವ್ಯಾಕ್ಸಿನ್ ಇಂಟಲಿಜನ್ಸ್ ನೆಟ್‌ವರ್ಕ್ ಒಂದು ನೂತನ ತಾಂತ್ರಿಕ ಪರಿಹಾರವಾಗಿದ್ದು, ಭಾರತದಲ್ಲಿ ಲಸಿಕಾ ಸರಬರಾಜು ವ್ಯವಸ್ಥೆಯ ಪದ್ಧತಿಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಇದನ್ನು ಯುನೈಟೆಡ್ ನೇಷನ್ಸ್ ಡೆವಲಪ್‌ಮೆಂಟ್ ಪ್ರೊಗ್ರಾಮ್ (UಓಆP) ಸಹಾಯದಿಂದ ಭಾರತ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಜಾರಿಗೊಳಿಸಿದೆ ಎಂದರು.

ಅಕ್ಟೋಬರ್ ೨೦೧೫ ರಲ್ಲಿ ಪ್ರಾರಂಭವಾದ ಇವಿಐಎನ್ ವ್ಯವಸ್ಥೆಯನ್ನು ಭಾರತದ ೧೯ ರಾಜ್ಯಗಳಲ್ಲಿ ಹಾಗೂ ೨ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ರಾಷ್ಟçದ ೫೨೧ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.

ಧಾರವಾಡ ಜಿಲ್ಲೆಯ ೬೨ ಸ್ಥಳಗಳಿಗೆ ಇವಿಐಎನ್ ಸೌಲಭ್ಯ ಮೂಲಕ ಲಸಿಕಾ ಸಾಗಾಣಿಕೆಯನ್ನು ಸಮರ್ಥವಾಗಿ ನಿರ್ವಹಿಸಲಾಗುತ್ತಿದೆ. ಇವುಗಳಲ್ಲಿನ ಉಪಕರಣಕ್ಕೆ ಸಿಮ್ ಹೊಂದಿದ ತಾಪಮಾನ ಲಾರ‍್ಸ್ಗಳನ್ನು ಆಳವಡಿಸಲಾಗಿದ್ದು, ಇದು ಉಪಕರಣಗಳಲ್ಲಿರಿಸದ ಡಿಜಿಟಲ್ ಸೆನ್ಸಾರ್ ಮೂಲಕ ತಾಪಮಾನದ ಮಾಹಿತಿಯನ್ನು ಒದಗಿಸುತ್ತದೆ. ತಾಪಮಾನದ ದಾಖಲೆ ಮತ್ತು ವರದಿಯನ್ನು ಪ್ರತಿ ಗಂಟೆಗೊಮ್ಮೆ ಜಿಪಿಆರ್‌ಎಸ್ ಸಂದೇಶ ಮೂಲಕ ತಿಳಿಸುತ್ತದೆ. ತಾಪಮಾನದಲ್ಲಿ ವ್ಯತ್ಯಾಸವಾದರೆ ಲಾರ‍್ಸ್ ಎಚ್ಚರಿಕೆಯ ಶಬ್ದ ಮಾಡಿ, ಎಸ್‌ಎಂಎಸ್ ಹಾಗೂ ಈ-ಮೇಲ್ ಮೂಲಕ ಸಂಬAಧಿಸಿದ ತಂತ್ರಜ್ಞರಿಗೆ ಮತ್ತು ನಿರ್ವಾಹಕರಿಗೆ ಸೂಚನೆ ನೀಡುತ್ತದೆ ಎಂದು ತಿಳಿಸಿದರು.

ಬೆಳಗಾವಿ ವಿಭಾಗದ ಯೋಜನಾಧಿಕಾರಿ ಡಾ.ಪ್ರವೀಣಸ್ವಾಮಿ ಇವರು ತಾಪಮಾನ ಲಾರ‍್ಸ್ಗಳ ಕಾರ್ಯ ನಿರ್ವಹಣೆ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ತಾಪಮಾನ ಲಾರ‍್ಸ್ಗಳ ಮಹತ್ವ ಮತ್ತು ಪ್ರಯೋಜನೆಗಳ ಬಗ್ಗೆ ಮಾಹಿತಿ ನೀಡಿದರು

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಎಸ್.ಎಂ.ಹೊನಕೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ನೋಡಲ್ ಅಧಿಕಾರಿ ಡಾ. ಗೀತಾ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಶಶಿ ಪಾಟೀಲ್, ವ್ಯಾಕ್ಸಿನ್ ಕೋಲ್ಡ್ಚೈನ್ ಮ್ಯಾನೇಜರ್ ಹಾಗೂ ವ್ಯಾಕ್ಸಿನ್ ಕೋಲ್ಡ್ ಚೈನ್ ಟೆಕ್ನಿಷಿಯನ್ ಹಾಗೂ ಜಿಲ್ಲಾ ಆರೋಗ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...