ಸೌಹಾರ್ದಯುತ ಜೀವನದಿಂದ ಸಮಾಜದಲ್ಲಿ ಶಾಂತಿ ಮತ್ತು ಪ್ರಗತಿ ಸಾಧಿಸಲು ಸಾಧ್ಯ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

Source: so news | Published on 19th January 2020, 12:07 AM | State News | Don't Miss |

 

ಧಾರವಾಡ: ಸಮಾಜದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಮೇಲೆ ತಾರತಮ್ಯ ತೋರದೆ, ಎಲ್ಲಾ ಸಮಾಜದವರು ಅನ್ಯೋನ್ಯತೆ ಮತ್ತು ಶಾಂತಿ, ಸೌಹಾರ್ದತೆಯಿಂದ ಬದುಕಿದರೆ ಶಾಂತಿ ಮತ್ತು ಪ್ರಗತಿಯನ್ನು ಕಾಣಬಹುದು ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರು ತಿಳಿಸಿದರು.

ಅವರು ಇಂದು ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನೆ ಸಂಸ್ಥೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ-ಸಮಸ್ಯೆ ಮತ್ತು ಸವಾಲುಗಳ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ, ಮಾತನಾಡಿದರು.

ಕಾಯ್ದೆಯು ಅನುಷ್ಠಾನದಲ್ಲಿದ್ದರೂ ದಲಿತರ ಮೇಲೆ ಕೆಲವು ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಪೆÇಲೀಸ್ ವರಿμÁ್ಠಧಿಕಾರಿಗಳು ಕೂಡಲೇ ಕ್ರಮವಹಿಸಿ ಸಮಾಜದಲ್ಲಿ ಶೋಷಣೆ, ದೌರ್ಜನ್ಯ ಪ್ರಕರಣಗಳು ಉಲ್ಬಣವಾಗಂತೆ ಕ್ರಮಕೈಗೊಳ್ಳಬೇಕು. ಎಲ್ಲೆಡೆಯೂ ಸೌಹಾರ್ದಯುತ ವಾತಾವರಣ ಬೆಳೆಯುವಂತೆ ಮಾಡಬೇಕು. ಕಾಲಕಾಲಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳು ಸಭೆ ನಡೆಸಿ ಪರಿಶೀಲಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಬೇಕು. ಪರಿಶಿಷ್ಟರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳಿದ್ದು, ಯೋಜನೆಗಳನ್ನು ಅಧಿಕಾರಿಗಳು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟರು ಶಿಕ್ಷಣ ಪಡೆದು ಸ್ವಾವಲಂಬಿಗಳಾದಾಗ ಮಾತ್ರ ಇಂತಹ ಶೋಷಣೆ, ದೌರ್ಜನ್ಯಗಳು ಉದ್ಬವಿಸುವುದಿಲ್ಲ. ಶಿಕ್ಷಣವೇ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿದೆ ಎಂದು ಅವರು ತಿಳಿಸಿದರು.

ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ (ತಿದ್ದುಪಡಿ) ಕಾಯ್ದೆ ಜಾರಿಗೆ ಬಂದ ಮೇಲೆ ದೌರ್ಜನ್ಯಕ್ಕೆ ಒಳಪಟ್ಟು, ಮೃತಪಟ್ಟ ಕುಟುಂಬಗಳಿಗೆ 8 ಲಕ್ಷ 25 ಸಾವಿರ ಮತ್ತು ಕುಟುಂಬಸ್ಥರಿಗೆ ಸರ್ಕಾರ ಉದ್ಯೋಗ ನೀಡುವುದು ಮತ್ತು ಪಿಂಚಣಿ ಪಡೆಯುವುದು ಹಾಗೂ ಇನ್ನಿತರ ಸೌಲಭ್ಯಗಳನ್ನು ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಕಾಯ್ದೆ ತಿದ್ದುಪಡಿ ನಂತರ 2016-17ನೇ ಸಾಲಿನಲ್ಲಿ ದೌರ್ಜನ್ಯಗೊಳಗಾದ ಸಂತ್ರಸ್ತರ 1912 ಪ್ರಕರಣಗಳಲ್ಲಿ 10 ಕೋಟಿ ರೂ., 2017-18 ರಲ್ಲಿ 2,226 ಪ್ರಕರಣಗಳಲ್ಲಿ 35 ಕೋಟಿ ರೂ., 2018-19 ನೇ ಸಾಲಿನಲ್ಲಿ 2200 ಪ್ರಕರಣಗಳಲ್ಲಿ 46 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಅವರು ಹೇಳಿದರು.

ಕಳೆದ ಐದು ವರ್ಷಗಳಲ್ಲಿ 4,214 ದೌರ್ಜನ್ಯ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ. ದೌರ್ಜನ್ಯ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ವಿಶೇಷ ನ್ಯಾಯಾಲಯಗಳನ್ನು ಪ್ರಾರಂಭ ಮಾಡಲಾಗಿದೆ. ಮತ್ತು ಅವು ರಾಯಚೂರು, ಕಲಬುರಗಿ, ಬಿಜಾಪುರಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ.

ಸಮಾರಂಭದ ಅಧ್ಯಕ್ಷತೆ ವಹಿಸಿ ಶಾಸಕ ಅರವಿಂದ ಬೆಲ್ಲದ ಮಾತನಾಡಿದರು. ಹಾವೇರಿ ಶಾಸಕ ನೆಹರು ಓಲೇಕಾರ, ಭಾರತ ಸರ್ಕಾರದ ಸಹಾಯಕ ಸಾಲಿಸಿಟರ್ ಜನರಲ್ ಅರುಣ ಜೋಶಿ, ಕರ್ನಾಟಕ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ.ಎ.ಎಸ್. ಶಿರಾಳಶೆಟ್ಟಿ, ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳಾದ ಡಾ.ಕೆ. ರಾಮಚಂದ್ರರಾವ್, ಮಂಜುನಾಥ ಕೆ. ಅಣ್ಣಿಗೇರಿ, ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಪೆÇ್ರ.ಟಿ.ಟಿ. ಬಸವನಗೌಡ, ಸಮಾಜ ಕಲ್ಯಾಣ ಇಲಾಖೆಯ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಗಳ ಸಲಹೆಗಾರ ಇ.ವೆಂಕಟಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ನಿರ್ದೇಶಕ ಡಾ. ಬಿ.ಕೆ.ಎಸ್. ವರ್ಧನ್, ಕವಿವಿ ಹಣಕಾಸು ಅಧಿಕಾರಿ ಪೆÇ್ರ.ಆರ್.ಎಲ್. ಹೈದ್ರಾಬಾದ್, ಸೇರಿದಂತೆ ಅಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಸಿ.ಬಿ. ಹೊನ್ನುಸಿದಾರ್ಥ ಸ್ವಾಗತಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಸುಭಾಸ್‍ಚಂದ್ರ ನಾಟಿಕಾರ ಅತಿಥಿ ಪರಿಚಯ ಮಾಡಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...