ಪತ್ರಕರ್ತರ ಅವಹೇಳನ;; ಕುಮಟಾ ಶಾಸಕ ದಿನಕರ್ ಶೆಟ್ಟಿ ಯವರ ಮೇಲೆ ಕ್ರಮ ಜರಗಿಸುವಂತೆ ಆಗ್ರಹ

Source: sonews | By Staff Correspondent | Published on 14th August 2020, 8:41 PM | Coastal News |

ಶಿರಸಿ : ಜಿಲ್ಲೆಯ ಪತ್ರಕರ್ತರ ಕುರಿತು ಕುಮಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಕುಮಟಾದ ಶಾಸಕರಾದ ದಿನಕರ ಶೆಟ್ಟಿ ಅವರ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ರಾಜ್ಯ ಸಮಿತಿ ಸದಸ್ಯರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಪಧಾಧಿಕಾರಿಗಳು, ತಾಲೂಕಾ ಅಧ್ಯಕ್ಷ, ಜಿಲ್ಲಾ ಸಮಿತಿ ಸದಸ್ಯರು, ಪ್ರತಿನಿಧಿಗಳು ಶುಕ್ರವಾರ ಇಲ್ಲಿನ ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಇತ್ತೀಚೆಗೆ ಕುಮಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚುನಾಯಿತ ಜನಪ್ರತಿನಿಧಿಗಳಾಗಿರುವ ಶಾಸಕರು ತಮ್ಮ ಸ್ಥಾನದ ಹಿರಿಮೆಯನ್ನು ಮರೆತು ಜಿಲ್ಲೆಯ ವರದಿಗಾರರ ಕುರಿತು ಅಪಮಾನಕರ ರೀತಿಯಲ್ಲಿ ಮಾತನಾಡಿದ್ದಾರೆ. ಪತ್ರಕರ್ತರು ವ್ಯವಸ್ಥೆಯಲ್ಲಿನ ತಮ್ಮ ಪರಿಧಿಯಲ್ಲಿ ಸಮಾಜ ಮತ್ತು ಆಡಳಿತ ವ್ಯವಸ್ಥೆಯ ಮಧ್ಯದ ಕೊಂಡಿಯಾಗಿ ಕ್ಲಿಷ್ಟ ಪರಿಸ್ಥಿತಿಯಲ್ಲಿಯೂ ಕಾರ್ಯನಿರ್ವಹಿಸುತ್ತಾರೆ. ಇಂತಹ ಹೇಳಿಕೆಗಳಿಂದ ವರದಿಗಾರರ ಆತ್ಮಗೌರವಕ್ಕೆ ಧಕ್ಕೆಯುಂಟಾಗುತ್ತದೆ ಹಾಗೂ ಜನರಲ್ಲಿ ತಪ್ಪು ತಿಳುವಳಿಕೆಗೆ ಕಾರಣವಾಗುತ್ತದೆ. ಇದರಿಂದ ಜನರ ಮಧ್ಯೆ ಕಾರ್ಯ ನಿರ್ವಹಿಸಬೇಕಾದ ಸಂದರ್ಭದಲ್ಲಿ ಪ್ರಾಣಭೀತಿ ಎದುರಿಸಬೇಕಾಗುತ್ತದೆ. ಜವಾಬ್ದಾರಿ ಸ್ಥಾನದಲ್ಲಿರುವ ಶಾಸಕರ ಇಂತಹ ಹೇಳಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ, ಪತ್ರಕರ್ತರ ಆತ್ಮಗೌರವಕ್ಕೆ ಧಕ್ಕೆ ಬರುವಂತಹ ಹೇಳಿಕೆಗೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು. ಪತ್ರಕರ್ತರಿಗೆ ರಕ್ಷಣೆ ಒದಗಿಸಬೇಕು, ಎಂದು ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ರಾಜ್ಯ ಸಮಿತಿ ಸದಸ್ಯ ಜಿ.ಸುಬ್ರಾಯ ಭಟ್ಟ, ಬಕ್ಕಳ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ನರಸಿಂಹ ಅಡಿ, ಸದಸ್ಯರುಗಳಾದ ಕೃಷ್ಣಮೂತರ್ಿ, ಪ್ರಸಾದ, ರಾಘವೇಂದ್ರ ಬೆಟ್ಟಕೊಪ್ಪ, ಗಣೇಶ ಹೆಗಡೆ, ಯಶ್ವಂತ ನಾಯ್ಕ, ರಾಜೇಂದ್ರ ಹೆಗಡೆ, ಸಂತೋಷ, ಶಿವಪ್ರಸಾದ, ರಾಜು, ಸಂದೇಶ, ರವಿ ಹೆಗಡೆ, ಗುರು ಶಾಸ್ತ್ರಿ, ಮಾದೇವ ನಾಯ್ಕ, ಹಾಗೂ ಇತರರು ಉಪಸ್ಥಿತರಿದ್ದರು.

Read These Next