ಪ್ರವಾಸಿ ತಾಣಗಳ ಅಭಿವೃದ್ಧಿಗೆ ಆಧ್ಯತೆ : ಜಿಲ್ಲಾಧಿಕಾರಿ.

Source: SO News | By Laxmi Tanaya | Published on 27th September 2020, 6:54 PM | Coastal News | Don't Miss |

ಕಾರವಾರ : ಜಿಲ್ಲಾ ಪ್ರವಾಸೋದ್ಯಮ ಸಮಿತಿಯಿಂದ ಪ್ರವಾಸಿ ತಾಣಗಳಿಗೆ ಮೂಲಭೂತ ಸೌಕರ್ಯಗಳು ಹಾಗೂ  ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ  ಪ್ರವಾಸೋದ್ಯಮಕ್ಕೆ  ಆಧ್ಯತೆ  ನೀಡಲಾಗುತ್ತಿದೆ  ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ತಿಳಿಸಿದರು.

ಜಿಲ್ಲೆಯ ಸದಾಶಿವಗಡದ ಕೋಟೆಯ ರೆಸಾರ್ಟ್‌ನಲ್ಲಿ ರವಿವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಸ್ಥಿರ ಪ್ರವಾಸೋದ್ಯಮಕ್ಕೆ ಒತ್ತು ಕೊಡಬೇಕಾಗಿದೆ ಹಾಗೂ ಅರಣ್ಯ ಚಾರಣ ಮಾಡಬೇಕಾದರೆ ಎಲ್ಲವನ್ನೂ ಸರ್ಕಾರವೇ ಮಾಡುವುದಕ್ಕಿಂತ ಅಲ್ಲಿ‌ನ ಜನರೇ ಹೆಚ್ಚಿನ‌ ಕಾಳಜಿ  ತೆಗೆದುಕೊಂಡಲ್ಲಿ  ವಾತಾವರಣ ಸ್ವಚ್ಛವಿಡಲು ಸಾಧ್ಯ ಮತ್ತು ಬರುವ ಪ್ರವಾಸಿಗರಿಗೆ ಆತಿಥ್ಯ ಕೊಡುವಂತಾದರೆ ಪ್ರವಾಸೋದ್ಯಮ ಅಭಿವೃದ್ಧಿ ಆಗುತ್ತದೆ.

ಜಿಲ್ಲೆಯಲ್ಲಿನ ಪ್ರವಾಸೋದ್ಯಮದ ರೂಪರೇಷೆಗಳನ್ನು ಬೇರೆಯವರು ಅನುಸರಿಸುವಂತಾಗಬೇಕು.
ಪ್ರತಿ ತಾಲೂಕುಗಳಲ್ಲಿ ಪ್ರವಾಸೋದ್ಯಮ ಯಾವ ರೀತಿ ಇರಬೇಕು ಎಂಬುವುದನ್ನಾ ಸಮಗ್ರವಾಗಿ ಚರ್ಚಿಸಬೇಕು ಎಂದರು.

ಪ್ರವಾಸೋದ್ಯಮದ ಸಮಗ್ರ ಚಿತ್ರಣ ಬೇಕಾದರೆ ಮೊದಲಿಗೆ ನೀಲ ನಕ್ಷೆ ತಯಾರಾಗಬೇಕು ಅಂದಾಗ ಮಾತ್ರ ಅಭಿವೃದ್ಧಿಯತ್ತ ಸಾಗುತ್ತದೆ.
ಮುಂದಿನ ದಿನಮಾನಗಳಲ್ಲಿ ಜಿಲ್ಲೆಯಲ್ಲಿ ಹೊಸ ವಾತಾವರಣ ಸೃಷ್ಟಿ ಆಗಲಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಪುರುಷೋತ್ತಮ ಎಸ್ ಅವರು ಮಾತನಾಡಿ,
ದೇಶ ಸುತ್ತಿ ನೋಡು ಕೋಶ ಓದಿ ನೋಡು ಎಂಬಂತೆ ಎಲ್ಲರೂ ಓದುವುದರ ಜೊತೆಗೆ ಹಲವಾರು ಕಡೆಗಳಲ್ಲಿ ಸುತ್ತಿ ಹಲವಾರು ಉತ್ತಮ ವಿಷಯಗಳನ್ನು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೋಮ್ ಸ್ಟೇ ಮಾಲೀಕಾರದ ರವೀಂದ್ರ ಪಂಡಿತ, ಕರಾವಳಿ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ನ ಸತೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...