ಧಾರವಾಡ ೩ನೇ ವಲಯ ಮಟ್ಟದ ಪದವಿ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

Source: SOnews | By Staff Correspondent | Published on 1st June 2023, 10:49 PM | Coastal News |

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮಂಗಳವಾರದAದು ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ೩ನೇ ವಲಯ ಮಟ್ಟದ ಪದವಿ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು. 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಟ್ಕಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ, ಕ್ರೀಡೆ ಕೇವಲ ಹವ್ಯಾಸವಲ್ಲ, ಇದೊಂದು ವೃತ್ತಿಯಾಗಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಇದ್ದೆ ಇರುತ್ತದೆ. ಅದನ್ನು ಕ್ರೀಡಾ ಸ್ಪೂರ್ತಿಯಿಂದ ಸರಿದೂಗಿಸಿಕೊಂಡು ಹೋಗಬೇಕೆಂದರು. 

ಭಟ್ಕಳ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ. ಸುರೇಶ್ ವಿ ನಾಯಕ ಮಾತನಾಡಿ ಯಾವುದೇ ಕ್ರೀಡಾಪಟುಗಳು ಸತತ ಅಭ್ಯಾಸದಲ್ಲಿ ತಲ್ಲಿನರಾಗಿರುವುದು ಅಗತ್ಯ ಎಂದರು. ಟ್ರಸ್ಟೀ ಮ್ಯಾನೇಜರ್ ರಾಜೇಶ್ ನಾಯಕ ಮಾತನಾಡಿ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳು ಅಗತ್ಯ ಎಂದರು. 

ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಸೇವೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.  ಉತ್ತರ ಕನ್ನಡ ಜಿಲ್ಲೆಯ ೧೫ ತಂಡಗಳು ಭಾಗವಹಿಸಿದ್ದು, ಡಾ. ಎ.ವಿ.ಬಾಳಿಗಾ ಪದವಿ ಕಾಲೇಜು, ಕುಮಟಾ ತಂಡವು ಪ್ರಥಮ ಹಾಗೂ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು, ಸಿರ್ಸಿ ತಂಡವು ದ್ವಿತೀಯ ಸ್ಥಾನ ಪಡೆಯಿತು. 

ಕುಮಟಾದ ಡಾ. ಎ.ವಿ.ಬಾಳಿಗಾ ಪದವಿ ಕಾಲೇಜಿನ ಕುಮಾರ ದೀಪಕ ಪಟಗಾರ ಬೆಸ್ಟ್ ಎಟಾಕರ್, ಕುಮಾರ ಗಿರೀಶ ನಾಯ್ಕ ಬೆಸ್ಟ್ ಪಾಸರ್, ಸಿರ್ಸಿ ಪ್ರಥಮ ದರ್ಜೆ ಪದವಿ ಕಾಲೇಜಿನ ಕುಮಾರ ಸಂದೀಪ ಎಂ ಗೌಡ ಆಲ್‌ರೌಂಡರ್ ಪ್ರಶಸ್ತಿಗಳನ್ನು ಪಡೆದರು. 

ಪ್ರಾಂಶುಪಾಲ ಶ್ರೀನಾಥ ಪೈ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಗಿರೀಶ್ ನಾಯ್ಕ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವಿನಾಯಕ ನಾಯ್ಕ, ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು, ಕ್ರೀಡಾಪಟುಗಳು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಧ್ಯಾಪಕ ದೇವೇಂದ್ರ ಕಿಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...