ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

Source: SO News | By Laxmi Tanaya | Published on 22nd April 2024, 10:27 PM | State News | Don't Miss |

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ಅಭ್ಯರ್ಥಿಗಳಲ್ಲಿ ಎಂಟು ಅಭ್ಯರ್ಥಿಗಳು ಇಂದು ನಾಮಪತ್ರ ಹಿಂಪಡೆಯಲು ನೀಡಿದ್ದ ಸಮಯದಲ್ಲಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದು, ಅಂತಿಮವಾಗಿ ಧಾರವಾಡ ಲೋಕಸಭಾ ಚುನಾವಣಾ ಸ್ಪರ್ಧೆಯಲ್ಲಿ 17 ಜನ ಅಭ್ಯರ್ಥಿಗಳು ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

  ಈ ಕುರಿತು ಪ್ರಕಟಣೆ ನೀಡಿರುವ ಅವರು, ಕ್ರಮಬದ್ದವಾಗಿ ನಾಮನಿರ್ದೇಶನಗೊಂಡಿದ್ದ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಲು ಇಚ್ಚಿಸಿದ್ದಲ್ಲಿ ಅವರಿಗೆ ಇಂದು (ಏಪ್ರೀಲ್ 22) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು. ಅದರಂತೆ ಒಟ್ಟು ಎಂಟು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ಸು ಪಡೆದಿದ್ದಾರೆ.

ಕ್ರಮಬದ್ದವಾಗಿ ನಾಮನಿರ್ದೇಶನಗೊಂಡಿದ್ದ ವೀಣಾ ಜನಗಿ, ಪ್ರವೀಣಕುಮಾರ ಮಾದರ, ರವಿ ಪಟ್ಟಣಶೆಟ್ಟಿ, ರಿಯಾಜ ಶೇಖ, ದಿಂಗಾಲೇಶ್ವರ ಮಹಾಸ್ವಾಮಿಗಳು, ಶಿವಾನಂದ ಮುತ್ತಣ್ಣವರ, ರಾಜಶೇಖರಯ್ಯ ಕಂತಿಮಠ ಮತ್ತು ವೆಂಕಟೇಶ ಆಚಾರ್ಯ ಮಣ್ಣೂರ ಅವರು ತಮ್ಮ ಉಮೇದುವಾರಿಕೆ ವಾಪಸ್ಸು ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅಂತಿಮವಾಗಿ 11- ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಭಾರತೀಯ ಜನತಾ ಪಾರ್ಟಿಯಿಂದ ಪ್ರಲ್ಹಾದ ಜೋಶಿ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ವಿನೋದ ಅಸೂಟಿ ಮತ್ತು ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿ ನಾಕಿ ಭಾರತೀಯ ಏಕತಾ ಪಾರ್ಟಿಯಿಂದ ಜಾವೀದ ಅಹಮದ್ ಬೆಳಗಾಂವಕರ್, ಪ್ರಹಾರ ಜನಶಕ್ತಿ ಪಾರ್ಟಿಯಿಂದ ಟಾಕಪ್ಪ ಯಲ್ಲಪ್ಪ ಕಲಾಲ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಾಗರಾಜ ಕರೆಣ್ಣವರ, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಬುಗಡಿ ಬಸವಲಿಂಗಪ್ಪ ಈರಪ್ಪ, ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದಿಂದ ಮಹಮ್ಮದ ಇಸ್ಮಾಯಿಲ್ ಮುಕ್ತಿ, ಪ್ರೌಟೀಸ್ಟ್ ಬ್ಲಾಕ್ ಇಂಡಿಯಾ ಪಕ್ಷದಿಂದ ವಿನೋದ ದಶರಥ ಘೋಡಕೆ, ಇಂಡಿಯನ್ ಲೇಬರ್ ಪಾರ್ಟಿ (ಅಂಬೇಡ್ಕರ, ಪುಲೆ)ಯಿಂದ ವೆಂಕಟೇಶ ಪ್ರಸಾದ ಎಚ್., ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದಿಂದ ಶರಣಬಸವ ಗೋನವಾರ ಮತ್ತು ಟಿಪ್ಪು ಸುಲ್ತಾನ ಪಾರ್ಟಿಯಿಂದ ಬಂಕಾಪುರ ಶೌಖತ್ ಅಲಿ ಅವರು ಸ್ಪರ್ಧಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಗಳಾಗಿ ಡಾ. ಗುರಪ್ಪ ಹೆಚ್.ಇಮ್ರಾಪೂರ, ಪ್ರವೀಣ ಹ.ಹತ್ತೆನವರ, ಬಾಳನಗೌಡ್ರ ಮಲ್ಲಿಕಾರ್ಜುನಗೌಡ, ರಾಜು ಅನಂತಸಾ ನಾಯಕವಾಡಿ, ಶಕೀಲ ಅಹ್ಮದ ಡಿ ಮುಲ್ಲಾ ಮತ್ತು ಎಸ್.ಎಸ್.ಪಾಟೀಲ್ ಸ್ಪರ್ಧಿಸಿದ್ದಾರೆ.
ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ ಉಳಿದಿರುವ ಅಭ್ಯರ್ಥಿಗಳಿಗೆ ಭಾರತ ಚುನಾವಣಾ ಆಯೋಗದ ನಿಯಮಗಳ ಅನುಸಾರ ಚಿಹ್ನೆಗಳ ಹಂಚಿಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...