ಕೋವಿಡ್ ಸೋಂಕಿತರೊಂದಿಗೆ ಜೂಮ್ ವಿಡಿಯೋ ಮೂಲಕ ನೇರವಾಗಿ ಆರೋಗ್ಯ ವಿಚಾರಣೆ

Source: SO News | By Laxmi Tanaya | Published on 20th April 2021, 8:16 AM | State News | Don't Miss |

ಮಂಡ್ಯ :  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಕೋವಿಡ್ ವ್ಯಕ್ತಿಗಳೊಂದಿಗೆ ಜೂಮ್ ವಿಡಿಯೋ  ಮೂಲಕ ನೇರವಾಗಿ  ಕೋವಿಡ್ ಸೋಂಕಿತರೊಂದಿಗೆ ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್ . ಅಶ್ವಥಿ ಅವರು ಸಂವಾದಿಸಿ  ಮುಕ್ತವಾಗಿ ಮಾತನಾಡಿ ಅವರ ಸಮಸ್ಯೆಗಳನ್ನು ಆಲಿಸಿದರು. 

  ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ  ಜಿಲ್ಲೆಯ ಮಳವಳ್ಳಿ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ಮದ್ದೂರು, ನಾಗಮಂಗಲ ಮತ್ತು ಪಾಂಡವಪುರ ತಾಲ್ಲೂಕಿನ ಆರೋಗ್ಯ ಅಧಿಕಾರಿಗಳಿಗೆ ಅಲ್ಲಿನ ಕೋವಿಡ್ ಕೇಂದ್ರಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡು ಕ್ರಮಗಳನ್ನು ವಿಚಾರಿಸಿದರು ಹಾಗೂ ಕೋವಿಡ್ ವ್ಯಕ್ತಿಗಳನ್ನು ನೇರವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ  ಕೋವಿಡ್ ಸೋಂಕಿತರು ರೋಗಿಗಳು ಇಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದಾರೆ ಮತ್ತು ಊಟ, ಬಿಸಿ ನೀರಿನ ವ್ಯವಸ್ಥೆ, ಸ್ವಚ್ಛತೆ ಮತ್ತು ಉತ್ತಮವಾದ ಆಹಾರದ ವ್ಯವಸ್ಥೆಯನ್ನು ಮಾಡಿದ್ದಾರೆಂದು ಎಂದು ಮುಕ್ತವಾಗಿ ಮಾತನಾಡಿದರು.

  ಕೋವಿಡ್ ವ್ಯಕ್ತಿಗಳಿಗೆ ಉತ್ತಮ ಆಹಾರ ನೀಡಿ ಅವರಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು  ಎಲ್ಲಾ ತಾಲ್ಲೂಕಿನ ತಹಶೀಲ್ದಾರರಿಗೆ ಸೂಚಿಸಿದರು.

  ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ರೀತಿಯ ಸೌಲಭ್ಯಗಳ ವ್ಯವಸ್ಥೆ, ವೇಂಟಿಲೆಟರ್ಸ್, ಹಾಸಿಗೆ ವ್ಯವಸ್ಥೆಯ ಮತ್ತು ಇತರ ವ್ಯವಸ್ಥೆಗಳ ಬಗ್ಗೆ  ಪ್ರತಿ ತಾಲ್ಲೂಕಿನಲ್ಲಿನ ತಹಶೀಲ್ದಾರರ ಜತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ  ಸೂಚಿಸಿದರು.

  ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶೈಲಜಾ, ಮಿಮ್ಸ್ ನಿರ್ದೇಶಕರಾದ ಹರೀಶ್ , ಜಿಲ್ಲಾ ಸರ್ವೇಕ್ಷಣಧಿಕಾರಿಗಳಾದ ಸಂಜಯ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...