ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

Source: so news | Published on 5th December 2019, 12:33 AM | Coastal News | Don't Miss |

ಮಂಗಳೂರು:- ವಿಕಲಚೇತನರು ಎಂಬುದನ್ನು ಮನಸ್ಸಿನಿಂದ ದೂರವಿಟ್ಟು, ಸಾಧನೆಯ ಹಾದಿಯಲ್ಲಿ ಸಾಗುವ ಮನೋಭಾವ ಬೆಳಿಸಿಕೊಳ್ಳಬೇಕು.  ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು.
ಪುರಭವನದಲ್ಲಿ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧನಗರ, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯ ಉದ್ಘಾಟಿಸಿ ಅವರು ಮಾತಾನಾಡಿದರು.  ಕಣ್ಣು, ಕಿವಿ, ಕೈಕಾಲು ಇಲ್ಲದವರು ಮಾತ್ರ ವಿಕಲಚೇತನರಲ್ಲ, ನಮ್ಮಲ್ಲಿ ಅವರೂ ಒಬ್ಬರು ಎಂಬುದನ್ನು ಮರೆತಿರುವ ಸಮಾಜ ಅಂಗವಿಕಲವಾಗಿದೆ. ಅವರಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸಿ ಅವರಿಗೆ ಅವಕಾಶ ಕಲ್ಪಸಿ ಕೊಟ್ಟರೆ ಅವರು ಸಾಧನೆ ಮೂಲಕ ಮುಂದೆ ಬರುತ್ತಾರೆ. ವಿಕಲತೆ ಭಗವಂತನ ಒಂದು ರೂಪ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಶಾಸಕ ಡಿ ವೇದವ್ಯಾಸ ಕಾಮತ್  ಅಂಗವಿಕಲರು ದೇವರ ಮಕ್ಕಳಿದ್ದಂತೆ, ಅವರಿಗಾಗಿ ಅನೇಕ ಸಂಘ-ಸಂಸ್ಥೆಗಳು ದುಡಿಯುತ್ತಿವೆ. ಸರಕಾರದ ವತಿಯಿಂದ ಅವರಿಗೆ ಸೌಲಭ್ಯ ಸಿಗುವಂತೆ ನಾನು ಕೂಡ  ಶ್ರಮಿಸುತ್ತೇನೆ ಎಂದು ಹೇಳಿದರು.
ಬಳಿಕ ಮಾತಾನಾಡಿದ ಅವರು, ಸಮಾಜದಲ್ಲಿ ಸ್ವಾವಲಂಬಿಗಳಾಗಿ ಸದೃಢವಾಗಿ ಜೀವನ ನಡೆಸುವಂತೆ ಅವರಿಗೆ ಸ್ಪೂರ್ತಿ ತುಂಬಬೇಕು. ಅಂಗವೈಕಲ್ಯತೆಯನ್ನು ಮೆಟ್ಟಿ ನಿಲ್ಲಬೇಕು. ಪರಿಶ್ರಮಕ್ಕೆ ಯಶಸ್ಸಿನ ಗರಿ ಸಿಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆಯ್ದ ವಿಶೇಷ ಮಕ್ಕಳಿಗೆ ಸಾಧನ ಸಲಕರಣೆಯನ್ನು ವಿತರಿಸಲಾಯಿತು. ಬಿ.ಆರ್.ಡಬ್ಲೂ ಮತ್ತು ಎಂ.ಆರ್.ಡಬ್ಲೂ ಸಂಘಟಿಸಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ ಸದಸ್ಯೆ ಮಮತ ಗಟ್ಟಿ, ತುಳು ಅಕಾಡೆಮಿ ಅದ್ಯಕ್ಷ ದಯಾನಂದ್ ಕತ್ತಲ್‍ಸರ್, ವಿಕಲಚೇತನರ ಸಬಲೀಕರಣ ಅಧಿಕಾರಿ ಯಮುನಾ ಡಿ, ವಿಕಲಚೇತನರಿಗಾಗಿ ಶ್ರಮಿಸುತ್ತುರುವ ಸಂಘ- ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...