ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದ ಭಕ್ತರಿಗೆ ನಿರಾಶೆ. ಬುಧವಾರದಿಂದ ಮುಚ್ಚಿದ ದೇವಾಲಯ. ಸೇವೆಗಳು ಬಂದ್.

Source: SO News | By Laxmi Tanaya | Published on 21st April 2021, 7:24 PM | State News | Don't Miss |

ಮಂಗಳೂರು : ದೇವಸ್ಥಾನಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಿ ಸರ್ಕಾರದ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಸರ್ಪ ಸಂಸ್ಕಾರ ಸೇವೆಗೆ ಕುಕ್ಕೆಗೆ ಆಗಮಿಸಿದ ಭಕ್ತರು ಗೊಂದಲಕ್ಕೀಡಾದ ಘಟನೆ ಬುಧವಾರ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ  ಇಂದಿನಿಂದಲೇ  ಸರ್ಪ ಸಂಸ್ಕಾರ ಸೇರಿ ಎಲ್ಲ ಸೇವೆಗಳು ಬಂದ್ ಆಗಿವೆ. ಹೀಗಾಗಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಬುಕ್ ಮಾಡಿ ದೇವಸ್ಥಾನಕ್ಕೆ ಆಗಮಿಸಿರುವ ಭಕ್ತಾಧಿಗಳು ನಿರಾಶೆ ಅನುಭವಿಸುವಂತಾಯಿತು.

ದೂರದ ಊರುಗಳಿಂದ ಸರ್ಪಸಂಸ್ಕಾರ ಪೂಜೆ ನೆರವೇರಿಸಲು ಆಗಮಿಸಿದ್ದ ಭಕ್ತಾದಿಗಳು ಸರಕಾರದ ಆದೇಶದ ಹಿನ್ನಲೆಯಲ್ಲಿ  ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯವರನ್ನು ತರಾಟೆಗೆ ತೆಗೆದುಕೊಂಡರು.‌ ಕೊನೆಗೆ ಭಕ್ತರ ಮನವೊಲಿಸಿ ಹಣ ಮರುಪಾವತಿ ಮತ್ತು ಮುಂದಿನ ದಿನಾಂಕದಂದು ‌ಬರಲು ದೇವರ ಪ್ರಸಾದ ನೀಡಿ  ಆಡಳಿತ ಮಂಡಳಿಯವರು ಕಳುಹಿಸಿದರು 
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...