ಕಾರವಾರ: ಸರ್ವಋತು ರಸ್ತೆಯೊಂದಿಗೆ ಹೆಚ್ಚಿನ ಅನುದಾನಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚೆ; ಸಚಿವ ಸಿ.ಸಿ ಪಾಟೀಲ್

Source: S O News service | By I.G. Bhatkali | Published on 30th August 2021, 5:07 PM | Coastal News |

ಕಾರವಾರ: ಸರ್ವಋತು ರಸ್ತೆಯೊಂದಿಗೆ ಹೆಚ್ಚಿನ ಅನುದಾನಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಪಿ ಡಬ್ಲ್ಯೂ ಡಿ  ಸಚಿವ ಸಿ.ಸಿ ಪಾಟೀ¯ ಹೇಳಿದರು. 
ಸೋಮವಾರ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಅವರೊಂದಿಗೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮಕ್ಕೆ ಭೇಟಿ ನೀಡಿದ ಅವರು ಅತಿವೃಷ್ಟಿಯಿಂದ ಭೂ ಕುಸಿತವಾದ ಪ್ರದೇಶದ ಪರಿಶೀಲನೆ ನಡೆಸಿದರು.

ನಂತರ ಗ್ರಾಮಸ್ಥರ ಮನವಿಪತ್ರವನ್ನು ಸ್ವೀಕರಿಸಿ ಮಾತನಾಡಿ, ಬೆಂಗಳೂರಿನಿಂದ ನಿರ್ಣಯ ತೆಗೆದುಕೊಳ್ಳುದಕ್ಕೂ ಹಾಗೂ ಸ್ಥಳ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಈಗಾಗಲೇ ಮುಖ್ಯಮಂತ್ರಿಯವರು ಜಿಲ್ಲೆಯ  ನೆರೆ ಪೀಡಿತ ಹಾಗೂ ಭೂ ಕುಸಿತ ಸ್ಥಳಗಳನ್ನು ಪರಿಶೀಲಿಸಿ ಜಿಲ್ಲೆಗೆ 210 ಕೋಟಿ ಅನುದಾನ ನೀಡಿದ್ದಾರೆ. ಸಚಿವ ಶಿವರಾಮ್ ಹೆಬ್ಬಾರ್ ಅವರಿಂದ ರಸ್ತೆ ತೆರವು ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಕಾಮಗಾರಿ ಭರದಿಂದ ಸಾಗುತಿದ್ದು, ಪಿ ಡಬ್ಲ್ಯೂ ಡಿ ಇಲಾಖೆಯಿಂದ ಕಳಚೆ ಹಾಗೂ ಹಾನಿಯಾದ ಪ್ರದೇಶದಲ್ಲಿ ಸರ್ವಋತು ರಸ್ತೆ ನಿರ್ಮಾಣ ಮಾಡಲಾಗುವುದು ಹಾಗೂ ಹೆಚ್ಚಿನ ಅನುದಾನಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುದು ಎಂದರು.

ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ ಜನರು ಭಯ ಪಡುವ ಅಗತ್ಯವಿಲ್ಲ. ಆದಷ್ಟು ಬೇಗ ಮೂಲಸೌಕರ್ಯ ಹಾಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿ
ಜಿಲ್ಲೆಗೆ ಆಗಮಿಸಿದ ರಾಜ್ಯ ಲೋಕೋಪಯೋಗಿ ಖಾತೆ ಸಚಿವ ಹಾಗೂ ಜಿಲ್ಲೆಯ ಅರಣ್ಯ ಅಧಿಕಾರಿಗಳು ರಸ್ತೆ ತೆರವು ಕಾರ್ಯದಲ್ಲಿ ಸಾಕಷ್ಟು ಶ್ರಮಿಸಿದ್ದು ಎಲ್ಲರಿಗೂ   ಅಭಿನಂದನೆ ಸಲ್ಲಿಸಿದರು.

ಸಚಿವರು ಭೇಟಿ ನೀಡಿದ ಪ್ರದೇಶಗಳಲ್ಲಿ ಶಿರಸಿಯ  ಸಹಾಯಕ ಆಯುಕ್ತರಾದ ಆಕೃತಿ ಬನ್ಸಾಲ್, ಯಲ್ಲಾಪುರ ಮತ್ತು ಶಿರಸಿ ತಾಲೂಕಿನ  ತಹಶೀಲ್ದಾರ್‍ರು ಹಾಗೂ  ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದು ಅಗತ್ಯ ಮಾಹಿತಿ ನೀಡಿದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...